ಶಾಕಿಂಗ್ – ಕೊರೊನಾದಿಂದ ದೇಶದಲ್ಲಿ ಎಷ್ಟು ಮಕ್ಕಳು ಪೋಷಕರನ್ನು ಕಳೆದುಕೊಂಡಿದ್ದಾರೆ..?
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಈ ನಡುವೆ ಆಘಾತಕಾರಿ ಸಂಗಿತಿಯೊಂದು ಬಹಿರಂಗವಾಗಿದೆ. ಹೌದು ದೇಶದಲ್ಲಿ ಮಾರ್ಚ್ 2020ರಿಂದ ಏಪ್ರಿಲ್ 2021ರ ವೇಳೆಗೆ 1.19 ಲಕ್ಷಕ್ಕೂ ಅಧಿಕ ಮಕ್ಕಳು ತಮ್ಮ ಪೋಷಕರು ಅಥವಾ ಅಜ್ಜಿ-ತಾತಂದಿರನ್ನ ಕಳೆದುಕೊಂಡಿದ್ದಾರೆ ಎಂದು ಲಾನ್ಸೆಟ್ ಮೆಡಿಕಲ್ ಜರ್ನಲ್ನಲ್ಲಿ ಪ್ರಕಟವಾಗಿದೆ. 90,751 ಮಂದಿ ಮಕ್ಕಳು ತಂದೆಯನ್ನ ಕಳೆದುಕೊಂಡಿದ್ದರೆ, 25,500 ಮಕ್ಕಳು ಕೊರೊನಾದಿಂದಾಗಿ ತಾಯಿಯನ್ನ ಕಳೆದುಕೊಂಡಿದ್ದಾರೆ. 12 ಮಕ್ಕಳು ಪೋಷಕರನ್ನಿಬ್ಬರನ್ನೂ ಕಳೆದುಕೊಂಡಿದ್ದಾರೆ ಎಂದು ಅಧ್ಯಯನವು ಹೇಳಿದೆ.
ಸಾಂಕ್ರಾಮಿಕ ರೋಗ ಆರಂಭವಾದ ಮೊದಲ 14 ತಿಂಗಳಲ್ಲಿ 21 ದೇಶಗಳ 15 ಲಕ್ಷಕ್ಕೂ ಅಧಿಕ ಮಕ್ಕಳು ತಮ್ಮ ಪ್ರಾಥಮಿಕ ಹಾಗೂ ದ್ವಿತೀಯ ಆರೈಕೆದಾರರನ್ನ ಕಳೆದುಕೊಂಡಿದ್ದಾರೆ ಎಂದು ಅಮೆರಿಕದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಡ್ರಗ್ ಅಬ್ಯೂಸ್ ವರದಿಯಲ್ಲಿ ತಿಳಿಸಿದೆ. ಇಲ್ಲಿ ಪ್ರಾಥಮಿಕ ಆರೈಕೆದಾರರು ಅಂದರೆ ಪೋಷಕರು ಹಾಗೂ ದ್ವಿತೀಯ ಆರೈಕೆದಾರರು ಅಜ್ಜಿ-ತಾತ ಆಗಿದ್ದಾರೆ. ಭಾರತವನ್ನ ಹೊರತುಪಡಿಸಿ ಪೆರು, ದಕ್ಷಿಣ ಆಫ್ರಿಕಾ, ಮೆಕ್ಸಿಕೋ, ಬ್ರೆಜಿಲ್, ಕೊಲಂಬಿಯಾ, ಇರಾನ್, ಅಮೆರಿಕ, ಅರ್ಜೆಂಟೀನಾ ಹಾಗೂ ರಷ್ಯಾದಲ್ಲಿಯೂ 1000ದಲ್ಲಿ 1 ಮಗುವು ತನ್ನ ಪೋಷಕರನ್ನ ಸೋಂಕಿನಿಂದಾಗಿ ಕಳೆದುಕೊಂಡಿದೆ ಎಂದು ವರದಿ ಹೇಳಿದೆ. ಲ್ಯಾನ್ಸೆಟ್ ಅಧ್ಯಯನವು ನೀಡಿದ ಮಾಹಿತಿಯ ಪ್ರಕಾರ, ಪೋಷಕರನ್ನ ಕಳೆದುಕೊಂಡು ಅನಾಥವಾದ ಮಕ್ಕಳು ಬಡತನ, ನಿಂದನೆ ಹಾಗೂ ಶೋಷಣೆಯ ಪ್ರತಿಕೂಲ ಪರಿಣಾಮ ಎದುರಿಸುತ್ತಿದ್ದಾರೆ. ಇದರಿಂದಾಗಿ ಮಕ್ಕಳಲ್ಲಿ ಮಾನಸಿಕ ಸ್ವಾಸ್ಥ್ಯ ಕಳೆದುಕೊಳ್ಳೋದು, ದೈಹಿಕ ಹಿಂಸೆಯನ್ನ ಅನುಭವಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








