ಸೆಪ್ಟೆಂಬರ್ – ಅಕ್ಟೋಬರ್ ವೇಳೆಗೆ ದೇಶದಲ್ಲಿ ಕೋವಿಡ್ 3ನೇ ಅಲೆ ಫಿಕ್ಸ್ – ಜೊತೆಗೆ ಸಮಾಧಾನಕರ ಸಂಗತಿ ತಿಳಿಸಿದ AIIMS
ನವದೆಹಲಿ : ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಇದೀಗ ಭಾರತದಲ್ಲಿ ಕೊರೊನಾ ಸೋಂಕಿನ ಮೂರನೇ ಅಲೆಯು ಸೆಪ್ಟೆಂಬರ್- ಅಕ್ಟೋಬರ್ ವೇಳೆಗೆ ಕಾಣಿಸಿಕೊಳ್ಳಲಿದೆ ಎಂದು ದೆಹಲಿ ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ ತಿಳಿಸಿದ್ದಾರೆ.
ಈ ಸಂಭಾವ್ಯ ಮೂರನೇ ಅಲೆಯ ಪ್ರಭಾವ ಎರಡನೇ ಅಲೆಗಿಂತ ಕಡಿಮೆಯಿರುತ್ತದೆ ಎಂದು ಹೇಳಿದ್ದಾರೆ. ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯ ನಾಲ್ಕನೇ ರಾಷ್ಟ್ರೀಯ ಸೆರೋ ಸರ್ವೆಯಲ್ಲಿ, ದೇಶದ ಮೂರನೇ ಎರಡರಷ್ಟು ಮಂದಿ ಸೋಂಕಿನ ವಿರುದ್ಧ ರೋಗನಿರೋಧಕ ಶಕ್ತಿ ಹೊಂದಿರುವುದಾಗಿ ತಿಳಿಸಿದೆ. ಜೊತೆಗೆ ಲಸಿಕಾ ಪ್ರಕ್ರಿಯೆಯನ್ನೂ ಚುರುಕುಗೊಳಿಸಲಾಗಿದೆ. ಇವೆಲ್ಲವೂ ಮೂರನೇ ಅಲೆ ಪ್ರಭಾವವನ್ನು ತಗ್ಗಿಸಬಹುದಾಗಿದೆ ಎಂದು ಹೇಳಿದ್ದಾರೆ.
“ಆಧುನಿಕ ಭಾರತದಲ್ಲಿ ಹಿಂದುತ್ವಕ್ಕೆ ಎಲ್ಲಿಯೂ ಸ್ಥಳ ಇರಬರಾದು” – ಓವೈಸಿ
ಕೊರೊನಾ ಪ್ರಕರಣಗಳು ತಗ್ಗಿದ ಹಿನ್ನೆಲೆಯಲ್ಲಿ ಕೊರೊನಾ ನಿರ್ಬಂಧಗಳನ್ನು ಹಲವು ರಾಜ್ಯಗಳು ಸಡಿಲಿಸಿವೆ. ಜನರು ಕೊರೊನಾ ನಿಯಮಗಳನ್ನು ಮೀರುತ್ತಿದ್ದಾರೆ. ಸೆಪ್ಟೆಂಬರ್ ಅಕ್ಟೋಬರ್ ವೇಳೆಗೆ ಕೊರೊನಾ ಮೂರನೇ ಅಲೆ ಕಾಣಿಸಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಕೊರೊನಾ ಮೂರನೇ ಅಲೆ ಆಗಸ್ಟ್ ವೇಳೆಗೆ ದೇಶದಲ್ಲಿ ಆರಂಭವಾಗಲಿದೆ ಎಂದು ಐಸಿಎಂಆರ್ ಮಾಹಿತಿ ನೀಡಿತ್ತು. ಮಕ್ಕಳು ಈ ಅಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿಗೆ ತುತ್ತಾಗುತ್ತಾರೆ ಎನ್ನಲಾಗಿತ್ತು. ಈ ಕುರಿತು ಮಾತನಾಡಿರುವ ರಣದೀಪ್ ಗುಲೇರಿಯಾ, ಮಕ್ಕಳಿಗೆ ಗಂಭೀರ ಮಟ್ಟದಲ್ಲಿ ಸೋಂಕು ತಗುಲುವ ಸಾಧ್ಯತೆಯಿಲ್ಲ. ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿಗೆ ತುತ್ತಾಗುತ್ತಾರೆ ಎಂದು ಹೇಳುವಂತಿಲ್ಲ ಎಂದಿದ್ದಾರೆ.
ಶಾಕಿಂಗ್ – ಕೊರೊನಾದಿಂದ ದೇಶದಲ್ಲಿ ಎಷ್ಟು ಮಕ್ಕಳು ಪೋಷಕರನ್ನು ಕಳೆದುಕೊಂಡಿದ್ದಾರೆ..?
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.