ಬಿಜೆಪಿಯವರು ದಲಿತರನ್ನ ಸಿಎಂ ಮಾಡಲಿ : ಕಟೀಲ್ ಗೆ ಸಿದ್ದರಾಮಯ್ಯ ಸವಾಲ್
ಮಂಗಳೂರು : ಬಿಜೆಪಿಯಲ್ಲಿ ಇದೀಗ ಸಿಎಂ ಸ್ಥಾನ ಖಾಲಿಯಾಗುತ್ತಿದೆ. ದಲಿತ ಸಿಎಂ ಮಾಡಲು ಇದೀಗ ನಳಿನ್ ಕುಮಾರ್ ಕಟೀಲ್ ಅವಕಾಶ ಸಿಕ್ಕಿದೆ. ಈಗ ಅವರು ದಲಿತ ಸಿಎಂ ಮಾಡಲಿ ಎಂದು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ದಲಿತರನ್ನ ಸಿಎಂ ಮಾಡಲಿ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ ಪಕ್ಷದಿಂದ ದಲಿತ ಸಿಎಂ ಮಾಡಲು ನನಗೆ ಸವಾಲು ಹಾಕಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಹಲವು ಮಂದಿ ದಲಿತರು ಸಿಎಂ ಆಗಿದ್ದಾರೆ. ಬಿಜೆಪಿಯಲ್ಲಿ ಇದೀಗ ಸಿಎಂ ಸ್ಥಾನ ಖಾಲಿಯಾಗುತ್ತಿದೆ. ದಲಿತ ಸಿಎಂ ಮಾಡಲು ಇದೀಗ ನಳಿನ್ ಕುಮಾರ್ ಕಟೀಲ್ ಅವಕಾಶ ಸಿಕ್ಕಿದೆ. ಈಗ ಅವರು ದಲಿತ ಸಿಎಂ ಮಾಡಲಿ ಎಂದು ಸವಾಲೆಸೆದರು.

ಇದೇ ವೇಳೆ ಫೋನ್ ಕದ್ದಾಲಿಕೆ ವಿಚಾರವಾಗಿ ಬಿಜೆಪಿ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ, ಸುಪ್ರೀಂಕೋರ್ಟ್, ಹೈಕೋರ್ಟ್ ನ್ಯಾಯಾಧೀಶರ ಫೋನನ್ನು ಸಹ ಕದ್ದಾಲಿಕೆಯನ್ನು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಇದು ದೇಶದ್ರೋಹ ಪ್ರಕರಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಬಿಜೆಪಿ ಸರ್ಕಾರ ಫೋನ್ ಕದ್ದಾಲಿಕೆ ಮಾಡಿದೆ. ನನ್ನಲ್ಲಿ ಮೊಬೈಲ್ ಇಲ್ಲ. ನನ್ನ ಆಪ್ತ ಸಹಾಯಕ ವೆಂಕಟೇಶ್ ಅವರ ಫೋನ್ ಬಳಸುತ್ತೇನೆ. ಅದನ್ನು ಕದ್ದಾಲಿಸಿದ್ದಾರೆ. ಕುಮಾರಸ್ವಾಮಿ, ಪರಮೇಶ್ವರ್ ಅವರ ಫೋನ್ ಅನ್ನು ಕದ್ದಾಲಿಸಿ ಸಮ್ಮಿಶ್ರ ಸರ್ಕಾರ ಕೆಡವಿದ್ದಾರೆ. ಈ ಬಗ್ಗೆ ಹಾಲಿ ಸುಪ್ರೀಂಕೋರ್ಟ್ ನ್ಯಾಯಾಧೀಶರಿಂದ ತನಿಖೆ ಆಗಬೇಕು. ಈ ಸರ್ಕಾರಕ್ಕೆ ನೈತಿಕತೆಯಿಲ್ಲ ಎಂದು ಗುಡುಗಿದ್ದಾರೆ.








