ಈ ವರ್ಷ ದುಬೈನಲ್ಲೂ ‘ನೀಟ್’ಪರೀಕ್ಷಾ ಕೇಂದ್ರ ತೆರೆಯುವ ನಿರ್ಧಾರ…!
ನವದೆಹಲಿ : ಈ ಬಾರಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಗೆ (NEET) ದುಬೈನಲ್ಲೂ ಪರೀಕ್ಷಾ ಕೇಂದ್ರವನ್ನು ತೆರೆಯಲು ಶಿಕ್ಷಣ ಸಚಿವಾಲಯ ನಿರ್ಧರಿಸಿದೆ ಎನ್ನಲಾಗಿದೆ.. ಈ ಮೊದಲು ಕುವೈತ್‌ನಲ್ಲಿ ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಲು ಶಿಕ್ಷಣ ಸಚಿವಾಲಯ ನಿರ್ಧರಿಸಿತ್ತು.ಆದ್ರೆ ಮಧ್ಯಪ್ರಾಚ್ಯದಲ್ಲಿರುವ ಭಾರತೀಯ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕುವೈತ್ ಜೊತೆಗೆ ದುಬೈನಲ್ಲೂ ನೀಟ್ ಪರೀಕ್ಷೆ ನಡೆಸಲು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ನಿರ್ಧರಿಸಿದೆ. ಇದೇ ಮೊದಲ ಬಾರಿಗೆ ಇಂತಹದೊಂದು ಅವಕಾಶ ನೀಡಲಾಗ್ತಿದೆ.
RBI ನಿಂದ ಶೀಘ್ರವೇ ಡಿಜಿಟಲ್ ಕರೆನ್ಸಿ ಚಲಾವಣೆಗೆ ತರುವ ಕಾರ್ಯ – ಡೆಪ್ಯುಟಿ ಗವರ್ನರ್
ಈ ವರ್ಷ ಒಟ್ಟು 13 ಭಾಷೆಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದೆ. ಕನ್ನಡ, ಹಿಂದಿ, ಬಂಗಾಳಿ, ಒಡಿಯಾ, ಅಸ್ಸಾಮಿ, ಪಂಜಾಬಿ, ಗುಜರಾತಿ, ಮರಾಠಿ, ತೆಲುಗು, ಮಲಯಾಳಂ, ತಮಿಳು ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಆಗಸ್ಟ್ 1ರಂದು ನಡೆಯಬೇಕಿದ್ದ ನೀಟ್ ಪರೀಕ್ಷೆಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಲಾಗಿದೆ. ಪರೀಕ್ಷೆ ನಡೆಸುವ ನಗರಗಳ ಸಂಖ್ಯೆಯನ್ನು 155ರಿಂದ 198ಕ್ಕೆ ಏರಿಸಲಾಗಿದೆ. ಇದಕ್ಕೆ ಅನುಗುಣವಾಗಿ ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಲಾಗಿದೆ.