ಜುಲೈ 26 ರಿಂದ ತರಗತಿಗಳನ್ನ ಆರಂಭಿಸಿ : ಬೆಂಗಳೂರು ಸೆಂಟ್ರಲ್ ವಿವಿ
ಬೆಂಗಳೂರು : ಜುಲೈ 26 ರಿಂದ ಪದವಿ, ಸ್ನಾತಕೋತ್ತರ ಪದವಿ ಆಫ್ ಲೈನ್ ತರಗತಿಗಳನ್ನು ಆರಂಭಿಸುವುದಾಗಿ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ತಿಳಿಸಿದ್ದು, ಪ್ರಥಮ ಡೋಸ್ ಕೋವಿಡ್ ಲಸಿಕೆ ಪಡೆದ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುವಂತೆ ವಿವಿ ಸೂಚಿಸಿದೆ.
ಈ ಕುರಿತು ಸುತ್ತೋಲೆ ಹೊರಡಿಸಿರುವ ಕುಲಸಚಿವರು, ವಿಶ್ವವಿದ್ಯಾಲಯ ಧನಸಹಾಯ ಆಯೋಗ ಮತ್ತು ಕರ್ನಾಟಕ ಸರ್ಕಾರದ ನಿರ್ದೇಶನದ ಮೇರೆಗೆ ಜುಲೈ 26ರ ಸೋಮವಾರದಿಂದ ಬೆಂಗಳೂರು ಸೆಂಟ್ರಲ್ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಭೌತಿಕ ತರಗತಿಗಳು ಪುನರಾರಂಭಗೊಳ್ಳಲಿವೆ.
ವಿದ್ಯಾರ್ಥಿಗಳು ಕೋವಿಡ್-19 ಸಂಬಂಧ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
ಕೊರೊನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲಾ ಶಾಲಾ ಕಾಲೇಜುಗಳನ್ನು ಮುಚ್ಚಿತ್ತು. ಇದೀಗ ಸೋಂಕು ಇಳಿಮುಖವಾಗಿದ್ದು, ಪದವಿ ಕಾಲೇಜುಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ.









