ಎಚ್ಚರ : ರಾಜ್ಯದಲ್ಲಿ ಮುಂದುವರೆಯಲಿದೆ ಭಾರಿ ಮಳೆ Karnataka saaksha_tv
ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ವರುಣನ ಅಬ್ಬರ ಜೋರಾಗಿದ್ದು, ಇದು ಹೀಗೆ ಮುಂದುವರೆದಿದೆ ಎಂಧು ಹವಾಮಾನ ಇಲಾಖೆಯ ನಿರ್ದೇಶಕ ಸಿಎಸ್ ಪಾಟೀಲ್ ತಿಳಿಸಿದ್ದಾರೆ.
ಕಳೆದ ಕೆಲ ದಿನಗಳಿಂದ ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಭಾಗ, ಮಲೆನಾಡು ,ದಕ್ಷಿಣ ಕನ್ನಡ ಉಡುಪಿ, ಕೊಡಗು ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗಿದ್ದು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.
ಈ ಮಧ್ಯೆ ಕೆಲವು ಪ್ರದೇಶಗಳಲ್ಲಿ ಪ್ರವಾಹದ ಆತಂಕ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ಈ ಮಧ್ಯೆ ವರುಣನ ಆರ್ಭಟ ಹೇಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅರಬ್ಬಿ ಸಮುದ್ರದಲ್ಲಿ ಹಾಗೂ ಬಂಗಾಳ ಉಪಸಾಗರದಲ್ಲಿ ವಾಯುಬಾರ ಕುಸಿತದ ಕಾರಣ ಮಳೆಯ ಆರ್ಭಟ ಹೆಚ್ಚಾಗಿದ್ದು, ಮುಂದಿನ ತಿಂಗಳು ಕೂಡ ಪ್ರವಾಹ ಬರುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.









