ADVERTISEMENT
Tuesday, December 16, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಗುರುವಿನ ಪದದ ಅರ್ಥವೇನು ಮತ್ತು ಅದರ ಪರಿಪೂರ್ಣದ ಮಹತ್ವವೇನು..??

admin by admin
July 24, 2021
in Astrology, Newsbeat, ಜ್ಯೋತಿಷ್ಯ
gurupurnima saakshatv vedavyasa
Share on FacebookShare on TwitterShare on WhatsappShare on Telegram

ಗುರುವಿನ ಪದದ ಅರ್ಥವೇನು ಮತ್ತು ಅದರ ಪರಿಪೂರ್ಣದ ಮಹತ್ವವೇನು..??

gurupurnima saakshatv vedavyasaಗುರು ಪೂರ್ಣಿಮೆ : ದಿನಾಂಕ ೨೪-೦೭-೨೦೨೧, ಶನಿವಾರ  ಗುರುಪೂರ್ಣಿಮೆಮಹತ್ವ ಆಷಾಢ ಮಾಸದ ಹುಣ್ಣಿಮೆಯ ದಿನ ನಾವು ಆಚರಿಸುವ ಶ್ರೇಷ್ಠವಾದ ಹಬ್ಬವೆಂದರೆ “ಗುರು ಪೂರ್ಣಿಮೆ”.

Related posts

December 16, 2025
ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

December 16, 2025

ಈ ದಿನ ನಾವು ನಮ್ಮ ಗುರುಗಳಿಗೆ ವಂದನೆ ಸಲ್ಲಿಸುವ ದಿನ. ಗುರುವಿನ ಮಹತ್ವವನ್ನು ಸಾರುವ ದಿನ. ಗುರು ನಮಗೆ ಜೀವನದಲ್ಲಿ ಸರಿಯಾದ ದಿಕ್ಕು ಸೂಚಿಸುವ, ನಮ್ಮ ಕೈ ಹಿಡಿದು ನಡೆಸುವ, ಪರಮಾತ್ಮನ ಅರಿವನ್ನು ತಿಳಿಯಲು ನಮ್ಮೊಳಗಿರುವ ನಮ್ಮ ಆತ್ಮವನ್ನು ಜಾಗೃತಿಗೊಳಿಸುವ ಮಹತ್ವದ ವ್ಯಕ್ತಿ. ಆಧ್ಯಾತ್ಮದ ಹಾದಿಯಲ್ಲಿ ನಮ್ಮನ್ನು ನಡೆಸಿ,

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ನಮ್ಮ ಗುರಿ ಮುಟ್ಟಲು ಸಹಾಯ ಮಾಡುವವನೇ “ಗುರು”. ಹುಡುಕಿದರೆ ಸಿಗುವವನಲ್ಲ ಗುರು, ನಮ್ಮನ್ನು ಹುಡುಕಿ, ನಾವು ಗುರುವನ್ನು ಕಾಣುವ ಮಟ್ಟಿಗೆ ಸಾಧನೆ ಮಾಡಿದ್ದರೆ ತಾನಾಗೇ ನಮ್ಮ ಬಳಿಗೆ ಬರುವವನು. ನಾವು ಗುರುವಿನ ಮುಖಾಂತರವೇ ಪರಮಾತ್ಮನ ಅರಿವು ಅರಿಯಬೇಕಾಗಿರುವುದರಿಂದ, ನಾವು ಆಷಾಢ
ಪೌರ್ಣಮಿಯಂದು ಮಾತ್ರ ಗುರುವನ್ನು ಪೂಜಿಸದೆ.. ಅನು ದಿನ, ಅನು ಕ್ಷಣ, ಗುರುವನ್ನು ಅಂತರಂಗದಲ್ಲೇ ಪೂಜಿಸುತ್ತಾ ನಮ್ಮನ್ನು ನಾವು ಸಮರ್ಪಿಸಿಕೊಳ್ಳಬೇಕು. ಹೀಗೆ ನನ್ನದೇನೂ ಇಲ್ಲವೆಂಬ ಭಾವ ನಮ್ಮಲ್ಲಿ ಸದಾ ಜಾಗೃತವಾಗಿಟ್ಟುಕೊಂಡು, ಗುರುವಿನಲ್ಲಿ ಶರಣಾದರೆ ಮಾತ್ರ ನಮ್ಮ ಗುರಿ ಮುಟ್ಟುವ ಪ್ರಯತ್ನ ಸಫಲವಾಗುತ್ತದೆ.

ಉಪನಿಷತ್ತಿನ ಪ್ರಕಾರ “ಗು” ಎಂದರೆ ಅಂಧಕಾರವೆಂದೂ “ರು” ಎಂದರೆ ದೂರೀಕರಿಸುವವ ಅಥವಾ ಅಜ್ಞಾನದ ಅಂಧಕಾರವನ್ನು ನಿವಾರಿಸಿ ಜ್ಞಾನದ ಹಾದಿಗೆ ನಡೆಸುವವ ಎಂಬ ಅರ್ಥವಾಗುತ್ತದೆ. ಸಂಸ್ಕೃತದಲ್ಲಿ “ಗುರು” ಪದಕ್ಕೆ ಭಾರವಾದ ಎನ್ನುವ ಅರ್ಥವೂ ಇದೆಯೆನ್ನುತ್ತಾರೆ. ಯಾರು ಜ್ಞಾನದಿಂದ ಭಾರವಾಗಿರುವನೋ ಅವನೇ ಗುರು ಎಂದು ಅರ್ಥೈಸಬಹುದೇನೋ.

gurupurnima saakshatv vedavyasaಸ್ಕಂದ ಪುರಾಣದ “ಗುರುಗೀತೆ”ಯಲ್ಲಿ ಗುರುವನ್ನು ನಂದಾದೀಪದಂತೆ ಬೆಳಗುವ ಜ್ಯೋತಿಯಂತೆ ಎಂದು ಗುರುವಿನ ಹಿರಿಮೆಯನ್ನು ವಿಸ್ತಾರವಾಗಿ ತಿಳಿಸಿಲಾಗಿದೆ : ಅಖಂಡ ಮಂಡಲಾಕಾರಂ ವ್ಯಾಪ್ತಂ ಯೇನಾ ಚರಾಚರಂ

ತತ್ಪದಂ ದರ್ಶಿತಂ ಯೇನಾ ತಸ್ಮೈ ಶ್ರೀಗುರವೇ ನಮಃ |

ಆದಿಗುರು ಶ್ರೀ ಶಂಕರಾಚಾರ್ಯರು ಗುರು ಸ್ತೋತ್ರವನ್ನು
ಹೀಗೆ ಹೇಳುತ್ತಾರೆ :

ಗುರುರ್ಬ್ರಹ್ಮಾ ಗುರುರ್ವಿಷ್ಣುಃ | ಗುರುರ್ದೇವೋ
ಮಹೇಶ್ವರಃ |

ಗುರುಸ್ಸಾಕ್ಶಾತ್ ಪರಬ್ರಹ್ಮಃ | ತಸ್ಮೈ ಶ್ರೀ ಗುರವೇ ನಮಃ ||

ಗುರುವು ಬ್ರಹ್ಮ, ವಿಷ್ಣು ಮತ್ತು ಮಹೇಶ್ವರನ ಸ್ವರೂಪಿಯಾಗಿದ್ದು, ಅದಕ್ಕೂ ಮಿಗಿಲಾದ ಪರಬ್ರಹ್ಮ ತತ್ತ್ವವೇ ಆಗಿದ್ದಾನೆ. ಅಂಥ ಗುರುವಿಗೆ ಪ್ರಣಾಮಗಳು
ಎಂಬ ಅರ್ಥವಾಗುತ್ತದೆ. ಅಜ್ಞಾನ ತಿಮಿರಾಂಧಸ್ಯ ಜ್ಞಾನಾಂಜನ ಶಲಾಕಯಾ | ಚಕ್ಷುರುನ್ಮೀಲಿತಂ ಯೇನ ತಸ್ಮೈ ಶ್ರೀ ಗುರವೇ ನಮಃ | ಅಂದರೆ ನಮ್ಮಲ್ಲಿರುವ ಅಜ್ಞಾನವೆಂಬ ಕಣ್ಣಿಗೆ ಅಂಟಿದ ಅಂಧಕಾರವನ್ನು ಜ್ಞಾನವೆಂಬ ಕಡ್ಡಿಯಿಂದ ಗುಣಪಡಿಸಿ, ಶಿಷ್ಯನ ಏಳಿಗೆಗೆ ಬೇಕಾದ ಸೋಪಾನವನ್ನು ಹತ್ತಿಸುವ, ಸಾಧನೆಯ ಮಾರ್ಗದರ್ಶನ ಮಾಡುವ ಶ್ರೀ ಗುರುವಿಗೆ ವಂದನೆಗಳು.

ಹೀಗೆ ನಮ್ಮ ಪರಂಪರೆಯಲ್ಲಿ ಅನಾದಿ ಕಾಲದಿಂದಲೂ ಗುರುವಿನ ಮಹತ್ವವನ್ನು ಸಾರುತ್ತಾ

ನ ಗುರೋರಧಿಕಂ ತತ್ವಂ, ನ ಗುರೋರಧಿಕಂ ತಪಃ |

ತತ್ವ ಜ್ಞಾನಾತ್ ಪರಂ ನಾಸ್ತಿ, ತಸ್ಮೈ ಶ್ರೀ ಗುರವೇ ನಮಃ ||

ಅಂದರೆ ಗುರುವಿಗಿಂತ ಮೀರಿದ ತತ್ವ, ತಪಸ್ಸು ಬೇರೆ ಯಾವುದೂ ಇಲ್ಲ. ಜ್ಞಾನದ ದಾರಿದೀಪ ತೋರುವವನಾದ ಶ್ರೀ ಗುರುವೇ ನಿನಗೆ ವಂದನೆಗಳು ಎಂದು ಹೇಳಿದ್ದಾರೆ. ಶಾಶ್ವತವಾದ ಆನಂದವನ್ನು ಹೊಂದುವುದು ಸದ್ಗುರುವಿನ ಅನುಗ್ರಹದಿಂದ ಮಾತ್ರವೇ ಸಾಧ್ಯವೆಂದು ಶ್ರೀ ಶಂಕರಾಚಾರ್ಯರು ತಮ್ಮ ಗುರ್ವಷ್ಟಕಮ್ ನಲ್ಲಿ ಕೂಡ ಹೀಗೆ ಹೇಳಿದ್ದಾರೆ :

ಶರೀರಂ ಸುರೂಪಂ ತಥಾ ವಾ ಕಲತ್ರಂ

ಯಶಶ್ಚಾರು ಚಿತ್ರಂ ಧನಂ ಮೇರುತುಲ್ಯಮ್ ||೧||

ಕಲತ್ರಂ ಧನಂ ಪುತ್ರಪೌತ್ರಾದಿ ಸರ್ವಂ

ಗೃಹಂ ಬಾಂಧವಾಃ ಸರ್ವಮೇತದ್ಧಿ ಜಾತಮ್ ||೨||

ನಮಗೆ ಸುಂದರ ಶರೀರ, ಅಪಾರ ಅಂತಸ್ತು, ಕೀರ್ತಿ, ಸಂಸಾರ ಎಲ್ಲವೂ ಇದ್ದರೂ ಗುರುವಿನ ಚರಣಗಳಲ್ಲಿ ಭಕ್ತಿ ಶ್ರದ್ಧೆ ಇಲ್ಲದವನಿಗೆ ಮೋಕ್ಷವಿಲ್ಲ.

ಷಡಂಗಾದಿವೇದೋ ಮುಖೇ ಶಾಸ್ತ್ರವಿದ್ಯಾ

ಕವಿತ್ವಾದಿ ಗದ್ಯಂ ಸುಪದ್ಯಂ ಕರೋತಿ ||೩||

ವೇದ, ಶಾಸ್ತ್ರ ಪಾರಂಗತನಾಗಿ ಅನೇಕ ವಿದ್ಯೆಗಳನ್ನು ತಿಳಿದವನಾಗಿದ್ದರೂ ಕೂಡ ಸದ್ಗುರುವಿನ ಚರಣಗಳಲ್ಲಿ ನಿಷ್ಠೆ ಇಡದಿದ್ದರೆ ಮುಕ್ತಿಯಿಲ್ಲ.

ವಿದೇಶೇಷು ಮಾನ್ಯಃ ಸ್ವದೇಶೇಷು ಧನ್ಯಃ

ಸದಾಚಾರವೃತ್ತೇಷು ಮತ್ತೋ ನಾ ಚಾನ್ಯಃ ||೪||

gurupurnima saakshatv vedavyasaವಿದೇಶಗಳಲ್ಲಿ ತುಂಬಾ ಹೆಸರು ಮಾಡಿ, ಸ್ವದೇಶದಲ್ಲಿ ಆಚಾರ ಪಾಲಿಸಿ, ಎಲ್ಲರಿಗಿಂತ ಶ್ರೇಷ್ಠ ವ್ಯಕ್ತಿ ಎಂಬ ಹೆಸರು ಪಡೆದಿದ್ದರೂ ಸಹ ಗುರುಚರಣಗಳಲ್ಲಿ ಭಕ್ತಿ ಇಲ್ಲದವನ ಜೀವನ ನಿರರ್ಥಕ.

ಕ್ಷಮಾಮಂಡಲೇ ಭೂಪಭೂಪಾಲಬೃಂದೈ:

ಸದಾ ಸೇವಿತಂ ಯಸ್ಯ ಪಾದಾರವಿಂದಮ್ ||೫||

ಭೂಮಂಡಲದಲ್ಲಿ ಅನೇಕರಿಂದ ಪಾದ ಪೂಜಿಸಿ ಕೊಳ್ಳುವಂತಹ ವ್ಯಕ್ತಿಯಾಗಿದ್ದರೂ ಕೂಡ ತನ್ನ ಗುರುಗಳ ಪಾದ ಪೂಜಿಸದವನು ಮೇರು ವ್ಯಕ್ತಿತ್ವದವನಾಗಿದ್ದರೂ
ವ್ಯರ್ಥವೇ.

ಯಶೋ ಮೇ ಗತಂ ದಿಕ್ಷು ದಾನಪ್ರತಾಪಾತ್

ಜಗದ್ವಸ್ತು ಸರ್ವಂ ಕರೇ ಯತ್ಪ್ರಸಾದಾತ್ ||೬||

ಅನೇಕ ದಾನ ಧರ್ಮಗಳನ್ನು ಮಾಡಿ ಇಡೀ ಜಗತ್ತನ್ನೇ ಗೆದ್ದಿರುವೆನೆಂದು ಕೊಂಡಾಗಲೂ ಅವನು ತನ್ನ ಗುರುವಿನ ಅನುಗ್ರಹಕ್ಕೆ ಪಾತ್ರನಾಗದಿದ್ದರೆ ಎಲ್ಲವೂ ತೃಣ ಮಾತ್ರವೇ.

ನ ಭೋಗೇ ನ ಯೋಗೇ ನ ವಾ ವಾಜಿರಾಜೌ

ನ ಕಾಂತಾಮುಖೇ ನೈವ ವಿತ್ತೇಷು ಚಿತ್ತಮ್ ||೭||

ಲೌಕಿಕದ ಎಲ್ಲಾ ವ್ಯಾಪಾರಗಳಲ್ಲಿ ಆಸಕ್ತಿ ತೊರೆದಿದ್ದರೂ ಕೂಡ ಆ ವ್ಯಕ್ತಿಯ ಮನಸ್ಸು ಅಚಲವಾಗಿ ಗುರು ಚರಣಗಳಲ್ಲಿ ಶ್ರದ್ಧೆ ಹೊಂದಿರದಿದ್ದರೆ ಅವನ ವೈರಾಗ್ಯ
ಉಪಯೋಗವಿಲ್ಲದ್ದು, ಮೋಕ್ಷವನ್ನು ಹೊಂದಲಾರ.

ಅರಣ್ಯೇ ನ ವಾ ಸ್ವಸ್ಯ ಗೇಹೇ ನ ಕಾರ್ಯೇ

ನ ದೇಹೇ ಮನೋ ವರ್ತತೇ ಮೇ ತ್ವನರ್ಘ್ಯೇ ||೮||

ಸಮಸ್ತವನ್ನೂ ತ್ಯಜಿಸಿ, ಅರಣ್ಯದಲ್ಲಿ ವಾಸಿಸಿದರೂ ಕೂಡ, ಗುರುಚರಣಗಳಿಗೆ ಶರಣಾಗತನಾಗದಿದ್ದರೆ ಆತ ಸಂಸಾರ ಬಂಧನದಿಂದ ಮುಕ್ತನಾಗುವುದು ಸುಳ್ಳು.

ಹೀಗೆ ಮೇಲಿನ ಶ್ಲೋಕಗಳಲ್ಲಿ ನಾವು ಬದುಕಿನಲ್ಲಿ ಏನೆಲ್ಲಾ
ಸಾಧಿಸಿದ್ದರೂ, ತ್ಯಜಿಸಿದ್ದರೂ, ಗುರುವಿನ ಕರುಣೆ ಯಿಲ್ಲದೆ
ಎಲ್ಲವೂ ವ್ಯರ್ಥ ಎಂದು ತಿಳಿಸುತ್ತಾಪ್ರತಿಯೊಂದು ಶ್ಲೋಕದ
ಕೊನೆಗೂ ಮನಶ್ಚೇನ್ನ ಲಗ್ನಂ ಗುರೋರಂಘ್ರಿಪದ್ಮೇ | ತತಃ
ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ || ಎಂಬ ಮಾತನ್ನು ಪದೇ
ಪದೇ ಪುನಶ್ಚರಣ ಮಾಡುತ್ತಾ ಗುರುವಿನ ಪಾದಗಳಲ್ಲಿ
ಮನಸ್ಸನ್ನು ನಿಲ್ಲಿಸದಿದ್ದರೆ ನಮ್ಮ ಸಾಧನೆ ಕಷ್ಟಸಾಧ್ಯ
ಎನ್ನುತ್ತಾ ಗುರುವಿನ ಮಹತ್ವವನ್ನು ವಿವರಿಸುತ್ತಾರೆ.

gurupurnima saakshatv vedavyasaಆದಿ ಗುರು ಶ್ರೀ ಶಂಕರಾಚಾರ್ಯರು ಹಿಂದೂ ಧರ್ಮದಪುನರ್ಸ್ಥಾಪನೆ ಮತ್ತು ಪ್ರಚಾರ ಕಾರ್ಯಕ್ಕಾಗಿಯೇ ಬಂದವರು. ಅವರು ಅದ್ವೈತ ಸಿದ್ಧಾಂತವನ್ನು
ಪ್ರತಿಪಾದಿಸಿದರು. ನಂತರ ಬಂದವರು ಶ್ರೀ ರಾಮಾನುಜಾಚಾರ್ಯರು ಮತ್ತು ಇವರು ವಿಶಿಷ್ಟಾದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದರು. ಇವರಿಬ್ಬರ ನಂತರ
ಬಂದವರು ಶ್ರೀ ಮಧ್ವಾಚಾರ್ಯರು. ಆಚಾರ್ಯ ತ್ರಯರೆಂದೇ ಗುರುತಿಸಲ್ಪಡುವರು ನಮ್ಮ ಈ ಮೂವರು ಶ್ರೇಷ್ಠ ಗುರುಗಳು. ಅದ್ವೈತ, ವಿಶಿಷ್ಟಾದ್ವೈತ ಹಾಗೂ ದ್ವೈತ ಸಿದ್ಧಾಂತಗಳನ್ನು ಅನುಸರಿಸುವ ಗುರು ಪರಂಪರೆಯೇ ಬೆಳೆಯಿತು ಮತ್ತು ಈಗಲೂ ಅನೇಕ ಶಾಖೆಗಳಾಗಿ ವಿಭಜಿತವಾಗಿದ್ದರೂ, ಪರಂಪರೆ ಮುಂದುವರೆದಿದೆ. ಈ ಪರಂಪರೆಯಲ್ಲಿ ಈಗಿರುವ ಗುರುವಿನ ಗುರುವಿಗೆ ಪರಮಗುರು ಎಂದೂ, ಪರಮ ಗುರುವಿನ ಗುರುವನ್ನು
ಪರಾಪರ ಗುರು ಎಂದೂ, ಪರಾಪರ ಗುರುವಿನ ಗುರುವನ್ನು ಪರಮೇಷ್ಠಿ ಗುರು ಎಂದೂ ಗುರುತಿಸಲ್ಪಡುತ್ತಾರೆ. “ಗುರು ಪೂರ್ಣಿಮೆ’ ಯಂದುಸಮಸ್ತ ಗುರು ಪರಂಪರೆಯೇ ಪೂಜಿಸಲ್ಪಡುತ್ತದೆ.

ವೇದದಲ್ಲಿನ ಬ್ರಹ್ಮ ತತ್ವವನ್ನು ಅರಿತಿದ್ದ ವಿಷ್ಣುವಿನ ಅವತಾರವೆಂದೇ ಕರೆಯಲ್ಪಡುವ ಶ್ರೀ ವೇದವ್ಯಾಸರನ್ನು ನಾವು ವಿಶೇಷವಾಗಿ ನಮ್ಮ ಗುರು ಪರಂಪರೆಯ ಜೊತೆಗೇ “ಗುರು ಪೂರ್ಣಿಮೆ” ಯಂದು ಪೂಜಿಸುತ್ತೇವೆ. ಲೋಕಗುರು ಪರಮಗುರು ಎಂದೇ ಪ್ರಖ್ಯಾತರಾಗಿದ್ದರು ಶ್ರೀ ವೇದವ್ಯಾಸರು. ವೇದಗಳನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಿದ್ದರಿಂದ ಇವರನ್ನು ವೇದವ್ಯಾಸರೆಂದು ಕರೆದರು. ಇಡೀ ಮಾನವ ಕುಲಕ್ಕೇ ಒಳಿತಾಗಲೆಂದು ಮತ್ತು ವೇದಗಳ
ರಹಸ್ಯ ಸಾಮಾನ್ಯರೂ ಅರಿಯುವಂತಾಗ ಬೇಕೆಂದು ಅವರು ನಮಗಾಗಿ “ಮಹಾಭಾರತ”ವೆಂಬ ಲಕ್ಷ್ಯ ಶ್ಲೋಕಗಳಿರುವ “ಪಂಚಮವೇದ”ವನ್ನು ರಚಿಸಿ ಕೊಟ್ಟರು.
ಜೊತೆಗೇ ಭಾಗವತವನ್ನೂ ಮತ್ತು ಹದಿನೆಂಟು ಪುರಾಣಗಳನ್ನೂ ರಚಿಸಿಕೊಟ್ಟರು. ಇಂತಹ ಪುಣ್ಯಾತ್ಮರು ವೇದವ್ಯಾಸರು.ಆದ್ದರಿಂದಲೇ ಅವರನ್ನು
ಲೋಕಗುರುವೆಂದು ಕರೆದು ಶ್ರದ್ಧೆ ಹಾಗೂ ಭಕ್ತಿಯಿಂದ ಗುರು ಪೂರ್ಣಿಮೆಯಂದು ಪೂಜಿಸುತ್ತೇವೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ದಕ್ಷಿಣಕನ್ನಡ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

“ಗುರು” ಎನ್ನುವುದು ಒಬ್ಬ ವ್ಯಕ್ತಿ ಎಂದು ನೋಡದೆ ನಾವು ಒಂದು ಶಕ್ತಿ ಎಂದು ಅರ್ಥೈಸಿ ಕೊಂಡರೆ ನಮಗೆ ಗುರುವಿನ ಮಹತ್ವ ಇನ್ನೂ ಹೆಚ್ಚು ಆಳವಾಗಿ ತಿಳಿಯುತ್ತದೆ. ಬೇರೆ ಬೇರೆ ಗುರುಗಳು ಭೌತಿಕ ಶರೀರದಿಂದ ಅಂದರೆ ಹೊರಗಿನಿಂದ ನೋಡಲು ವ್ಯತ್ಯಾಸವಾಗಿದ್ದರೂ ಅವರೆಲ್ಲರ ಒಳಗಿನ
“ಗುರು ತತ್ವ” ಮಾತ್ರ ಒಂದೇ ಆಗಿರುತ್ತದೆ. ಅವೆರೆಲ್ಲರೂ ಹೊರ ಹೊಮ್ಮಿಸುವ, ಪಸರಿಸುವ ಲಹರಿಗಳು ತುಂಬಾ ಚೈತನ್ಯದಾಯಕವಾಗಿರುತ್ತದೆ. ಗುರುವಿಗೆ ಯಾವಾಗಲೂ ಶಿಷ್ಯನ ಉನ್ನತಿಯ, ಬೆಳವಣಿಗೆಯ ಚಿಂತನೆಯೇ ಆಗಿರುತ್ತದೆ. ಗುರು ತನ್ನ ಶಿಷ್ಯನನ್ನು ತಾನೇ ಹುಡುಕಿ ಕೊಳ್ಳುತ್ತಾನೆ. ಶಿಷ್ಯ ಸಿಕ್ಕಿದ ಕ್ಷಣವೇ ಗುರು ಶಿಷ್ಯನ ಏಳಿಗೆಯ “ಸಂಕಲ್ಪ” ಮಾಡಿಕೊಂಡು ಬಿಟ್ಟಿರುತ್ತಾನೆ.

ನಮ್ಮ ಉಪನಿಷತ್ತು, ಪುರಾಣಗಳು, ವೇದ, ಶಾಸ್ತ್ರಗಳೆಲ್ಲದರಲ್ಲೂ ಮತ್ತು ವಿಶೇಷವಾಗಿ ಭಕ್ತಿ ಮಾರ್ಗದಲ್ಲೂ ಗುರುವಿಗೆ ಅತ್ಯಂತ ಮಹತ್ವದ ಸ್ಥಾನವಿದೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣ – ಅರ್ಜುನರ ಸಂಬಂಧ ಮತ್ತು ರಾಮಾಯಣದಲ್ಲಿ ಶ್ರೀರಾಮ – ಹನುಮರ ಸಂಬಂಧಗಳು ಗುರು – ಶಿಷ್ಯರ ಸಂಬಂಧಕ್ಕೆ ಅತಿ ಸೂಕ್ತವಾದ ನಿದರ್ಶನಗಳು.

ಕೈವಾರ ತಾತಯ್ಯ ಎಂದೇ ಪ್ರಸಿದ್ಧರಾಗಿರುವ ಶ್ರೀ ಯೋಗಿನಾರೇಯಣರ ಬ್ರಹ್ಮಾಂಡಪುರಿ ಶತಕದಲ್ಲಿ ಕೂಡ ತಾತಯ್ಯನವರು ಗುರುವಿನ ಮಹತ್ವವನ್ನು ಸಾರುವ ಮಾತುಗಳನ್ನು ಆಡಿದ್ದಾರೆ :

ಬ್ರಹ್ಮರುದ್ರುಲಕೈನ – ಭಾವಿಂಪ ಶಕ್ಯಮಾ

ಆಧ್ಯಾತ್ಮವಿದ್ಯ ಗುರುಕೀಲು ಮಹಿಮ

ಆಧ್ಯಾತ್ಮ ವಿದ್ಯೆಗೆ ಗುರುವಿನ ಮಾರ್ಗದರ್ಶನ ಬೇಕೇ ಬೇಕು  ; ಗುರುವಿಲ್ಲದಿದ್ದರೆ ಬ್ರಹ್ಮರುದ್ರರಿಗೂ ಅವಶಕ್ಯ. ಆತ್ಮ ಸಾಕ್ಷಾತ್ಕಾರವಾಗಲು ಆಧ್ಯಾತ್ಮವಿದ್ಯ “ಗುರುಕೀಲು ಮಹಿಮೆ” – ಎಂಬುದು ಆಳವಾದ ತತ್ವಾರ್ಥ ಪದ. ಇದು ಮನಸ್ಸಿನ ಸಂಸ್ಕಾರಕ್ಕೆ ಹತ್ತಿರವಾದದ್ದು. ಭ್ರಮೆಗಳನ್ನು ಸ್ಪಷ್ಟವಾಗಿ ಹೇಳಿದ್ದಾರೆ.

“ಗುರುಕೀಲು” ಎಂದರೆ ಗುರುದೇವನು ಕಲಿಸಿಕೊಟ್ಟ ಕೀಲಿಕೈನಂತಹ ಸಾಧನಸೂತ್ರವೆಂದು ಅರ್ಥವಾಗುತ್ತದೆ. ತಾತಯ್ಯನವರು ಗುರುವಿಗೆ ‘ಮಾತೃಸ್ಥಾನ’ ಕೊಟ್ಟಿದ್ದಾರೆ. ಯೋಗ್ಯ ಹಾಗೂ ಸದ್ಗುರುವಿನ ಪಾದಗಳಿಗೆ ಶರಣಾದರೆ ಆತ ಉಪದೇಶ ಕೊಟ್ಟು ಉದ್ಧರಿಸುತ್ತಾನೆ. ನೀನು ಹುಡುಕುತ್ತಿರುವ
ಕುರಿಮರಿ ನಿನ್ನ ಕಂಕುಳಲ್ಲೇ ಇದೆ ಎಂದು ನಮ್ಮಲ್ಲೇ ಇರುವ ದೇವರನ್ನು ತೋರಿಸುತ್ತಾನೆ, ಸಾಧನಮಾರ್ಗ ಕಲಿಸುತ್ತಾನೆ. ಅದೇ ಗುರುಮಾರ್ಗ, ಅದು ಗುರುಸೂತ್ರ, ಅದೇ ಗುರುಕೀಲು. ಮನಸ್ಸನ್ನು ನಿಲ್ಲಿಸಲು ಜ್ಞಾನಬೋಧೆ ಮಾಡಿ ಗುರುವು ಸಾಧನಮಾರ್ಗ ತೋರಿಸುತ್ತಾನೆ. ಗುರು ಪರಂಪರೆ
ಹಾಗೂ ಗುರು-ಶಿಷ್ಯರ ಅತ್ಯಂತ ನಿಕಟ ಸಂಬಂಧವು ಮುಂದುವರೆದು ನಮ್ಮ ದಾಸಸಾಹಿತ್ಯದಲ್ಲೂ ಗಾಢವಾಗಿ
ಕಾಣಬಹುದಾಗಿದೆ.

Tags: #astrology#saakshatvbengalurugurupurnimahoroscopekarnatakakateelPandit Jnaneshwar Raovedavyasa
ShareTweetSendShare
Join us on:

Related Posts

by admin
December 16, 2025
0

ಅಮಾವಾಸ್ಯೆಯ ರಾತ್ರಿ ಈ ಸ್ಥಳದಲ್ಲಿ ನೀರನ್ನು ಇಡುವುದರಿಂದ ಪೂರ್ವಜರ ಮನಸ್ಸು ಶಾಂತವಾಗುತ್ತದೆ ಮತ್ತು ಪೂರ್ವಜರ ದುಷ್ಟಶಕ್ತಿಗಳು ದೂರವಾಗುತ್ತವೆ. ಪೂರ್ವಜರ ಹೃದಯಗಳು ಶಾಂತವಾಗಲಿ ಮತ್ತು ಪೂರ್ವಜರ ದೋಷವು ನಿವಾರಣೆಯಾಗಲಿ....

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

by Shwetha
December 16, 2025
0

ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

ಬಿಹಾರದ ಸೋಲಿನ ಕಹಿಯ ನಡುವೆಯೇ ಪ್ರಿಯಾಂಕಾ ಗಾಂಧಿ ಮನೆ ಬಾಗಿಲು ತಟ್ಟಿದ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ನಡೆದ ರಹಸ್ಯ ಸಭೆಯ ಅಸಲಿ ರಹಸ್ಯವೇನು?

by Shwetha
December 16, 2025
0

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ದೇಶದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ತಂತ್ರಗಾರಿಕೆಗಳಿಂದಲೇ ಖ್ಯಾತಿ ಗಳಿಸಿದ್ದ ಪ್ರಶಾಂತ್ ಕಿಶೋರ್, ಬಿಹಾರದಲ್ಲಿ ತಮ್ಮ...

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

ಜಿಬಿಎ ಚುನಾವಣಾ ರಣಕಹಳೆ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ 50 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಿದ ಡಿಕೆಶಿ

by Shwetha
December 16, 2025
0

ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯ ಬೆನ್ನಲ್ಲೇ ಇದೀಗ ಚುನಾವಣಾ ಸಿದ್ಧತೆಗೆ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಚಾಲನೆ ನೀಡಿದೆ. ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳಲ್ಲಿ ಸ್ಪರ್ಧಿಸಲು...

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ದೆಹಲಿ ಪೊಲೀಸರ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

by Shwetha
December 16, 2025
0

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram