ರಾಜ್ಯದಲ್ಲಿ ‘ಕರಿ ಮಾರಿ’ ಭೀತಿ – 3,629ಕ್ಕೆ ಏರಿದ ಬ್ಲ್ಯಾಕ್ ಫಂಗಸ್ ಕೇಸ್
ಬೆಂಗಳೂರು: ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಈ ನಡುವೆ ದಿನೇ ದಿನೇ ಕಪ್ಪು ಶೀಲೀಂದ್ರದ ಹಾವಳಿಯೂ ಹೆಚ್ಚಾಗ್ತಾಯಿದೆ. ಕೊರೊನಾ ಕೇಸ್ ಕಡಿಮೆಯಾಗುತ್ತಿದ್ದಂತೆ ಬ್ಲ್ಯಾಕ್ ಫಂಗಸ್ ಕೇಸ್ ಏರಿಕೆಯಾಗ್ತಾ ಇದೆ.
ಈವರೆಗೂ ರಾಜ್ಯದ 30 ಜಿಲ್ಲೆಗಳಲ್ಲೂ ಒಟ್ಟು 3,629 ಬ್ಲ್ಯಾಕ್ ಫಂಗಸ್ ಕೇಸ್ ದಾಖಲಾಗಿದ್ದು, ರಾಜ್ಯಾದ್ಯಂತ 334 ಜನ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಕೂಡ ಬ್ಲ್ಯಾಕ್ ಹಾವಳಿ ಜೋರಿದೆ. ಇಲ್ಲಿಯವರೆಗೂ ಬೆಂಗಳೂರಿನಲ್ಲಿ 1157 ಬ್ಲ್ಯಾಕ್ ಫಂಗಸ್ ಕೇಸ್ ದಾಖಲಾಗಿವೆ. ಜೊತೆಗೆ ಬ್ಲ್ಯಾಕ್ ಫಂಗಸ್ ಗೆ ಬೆಂಗಳೂರಿನಲ್ಲಿ 110ಜನ ಸಾವನ್ನಪ್ಪಿದ್ದಾರೆ. ಈ ಪೈಕಿ 824 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಕ್ಟೋರಿಯಾದಲ್ಲಿ 108 ಕೇಸ್, ಬೌರಿಂಗ್ ಆಸ್ಪತ್ರೆ 388 ಕೇಸ್, ಕೆಸಿ ಜನರಲ್ 04 ಕೇಸ್, ಇಂದಿರಾಗಾಂಧಿ 3 ಕೇಸ್ ಪತ್ತೆಯಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








