ಮಂಡ್ಯ : ಕೊರೊನಾ ಟೆಸ್ಟ್ ನಡೆಸದಂತೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಜನರನ್ನು ಎತ್ತಿಕಟ್ಟಿ ಗಲಾಟೆ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ನಗರದ ಅಂಬೇಡ್ಕರ್ ಭವನದಲ್ಲಿಂದು ಪತ್ರಕರ್ತರಿಗೆ ಕೋವಿಡ್ ಟೆಸ್ಟ್ ನಡೆಯುತ್ತಿತ್ತು. ಭವನದ ಬಳಿ ಶ್ರೀಕಂಠೇಗೌಡರ ಮನೆ ಇರುವ ಕಾರಣಕ್ಕೆ ಪರೀಕ್ಷೆ ಮಾಡಬೇಡಿ ಎಂದು ಜನರನ್ನು ಕರೆತಂದು ಗಲಾಟೆ ಮಾಡಿದ್ದಾರೆ. ಅಲ್ಲದೆ ಶ್ರೀಕಂಠೇಗೌಡರ ಪುತ್ರ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಈ ವೇಳೆ ಪೊಲೀಸರು ಪರಿಸ್ಥಿತಿಯಲ್ಲಿ ತಿಳಿಗೊಳಿಸುವ ಸಲುವಾಗಿ ಲಘು ಲಾಠಿ ಚಾರ್ಜ್ ಮಾಡಿದ್ದಾರೆ. ಅಲ್ಲದೆ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಶ್ರೀಕಂಠೆಗೌಡರ ಪುತ್ರನನ್ನು ವಶಕ್ಕೆ ಪಡೆದು ಪರೀಕ್ಷೆ ನಡೆಸಲು ಅನುವು ಮಾಡಿಕೊಟ್ಟಿದ್ದಾರೆಂದು ತಿಳಿದುಬಂದಿದೆ.
ಪಕ್ಷದ ಆಂತರಿಕ ವಿಚಾರದಲ್ಲಿ ಸಿಎಂ ಮತ್ತು ನಾನು ಮಾತ್ರ ಮಾತನಾಡುತ್ತೇವೆ, ಸಚಿವರು ಬಿಜೆಪಿ ವಿರುದ್ಧ ಗುಡುಗಲಿ: ಮಾಗಡಿ ಬಾಲಕೃಷ್ಣಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಖಡಕ್ ಎಚ್ಚರಿಕೆ!
ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ನಾಯಕರ ನಡುವೆ ನಡೆಯುತ್ತಿರುವ ಬಹಿರಂಗ ವಾಕ್ಸಮರಕ್ಕೆ ಕಡಿವಾಣ ಹಾಕಲು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮುಂದಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರಗಳ...








