ಸಚಿವ ಸ್ಥಾನದ ಆಕಾಂಕ್ಷಿನಾನಲ್ಲ, ವರಿಷ್ಠರ ನಿರ್ಧಾರಕ್ಕೆ ಬದ್ಧ : ರೇಣುಕಾಚಾರ್ಯ
ದಾವಣಗೆರೆ : ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದ್ದಾರೆ.
ಸಿಎಂ ಬದಲಾವಣೆ ಬಗ್ಗೆ ನ್ಯಾಮತಿಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ಆಗ್ತಾರೋ, ಇಲ್ಲವೋ ಎಂಬುದು ಗೊತ್ತಿಲ್ಲ.
ಸಿಎಂ ಹಾಗೂ ರಾಜ್ಯ ನಾಯಕರ ಮಧ್ಯೆ ಏನು ಚರ್ಚೆಯಾಗಿದೆ ನನಗೆ ಗೊತ್ತಿಲ್ಲ. ಸಿಎಂ ಬದಲಾವಣೆ ಬಗ್ಗೆ ಸ್ಪಷ್ಟ ಚಿತ್ರಣವಿಲ್ಲ.
ಕೇಂದ್ರದಿಂದ ಯಾವ ಸೂಚನೆ ಬರುತ್ತೋ, ಅದೇ ಫೈನಲ್ ಆಗಿರುತ್ತದೆ ಎಂದು ಸ್ಪಷ್ಟಪಡಿಸಿದರು.
ಅಲ್ಲದೆ ಯಾವುದೇ ನಾಯಕರು ಬಿ.ಎಸ್.ಯಡಿಯೂರಪ್ಪ ರಾಜೀನಾಮೆಗೆ ಒತ್ತಾಯಿಸಿಲ್ಲ. ಸಿಎಂ ಸಹ ಕೇಂದ್ರದ ಸೂಚನೆ ಪಾಲಿಸುತ್ತೇನೆ ಎಂದಿದ್ದಾರೆ ಹೊರತು, ರಾಜೀನಾಮೆ ನೀಡುತ್ತೇನೆ ಎಂದಿಲ್ಲ.
ವರಿಷ್ಠರು, ಶಾಸಕಾಂಗ ಪಕ್ಷದ ತೀರ್ಮಾನದಂತೆ ಸಿಎಂ ಆಯ್ಕೆಯಾಗುತ್ತೆ. ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ.
ಶಾಸಕ, ಸಚಿವನಾಗಿ ಒಳ್ಳೆಯ ಕೆಲಸ ಮಾಡಿದ್ದೇನೆ. ನನಗೂ ಸಚಿವ ಸ್ಥಾನ ನಿಭಾಯಿಸುವ ಸಾಮಥ್ರ್ಯ ಇದೆ. ಆದರೆ, ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.









