ಟೋಕಿಯೋ ಒಲಂಪಿಕ್ ನಲ್ಲಿ ಬೆಳ್ಳಿ ಗೆದ್ದ ಮೀರಾಬಾಯ್ ಗೆ ಕಿಚ್ಚನ ಅಭಿನಂದನೆ..!
ಟೋಕಿಯೋ ಒಲಂಪಿಕ್ ನಲ್ಲಿ 49 ಕೆಜಿ ವೇಟ್ ಲಿಫ್ಟರ್ ಸ್ಪರ್ಧೆಯಲ್ಲಿ ಗೆದ್ದು ಬಾರತಕ್ಕೆ ಬೆಳ್ಳಿ ತಂದುಕೊಟ್ಟ ಮೀರಾಭಾಯ್ ಚಾನುಗೆ ಸ್ಯಾಂಡಲ್ ವುಡ್ ನ ಸ್ಟಾರ್ ನಟ ಕಿಚ್ಚ ಸುದೀಪ್ ಅಭಿನಂದನೆಗಳನ್ನ ಸಲ್ಲಿಸಿದ್ದಾರೆ. ಮೀರಾಭಾಯ್ ಚಾನು ಬೆಳ್ಳಿ ಪದಕ ಗಳಿಸುವ ಮೂಲಕ ಟೋಕಿಯೋ ಒಲಂಪಿಕ್ ನಲ್ಲಿ ಭಾರತಕ್ಕೆ ಮೊದಲ ಪದಕ ತಂದು ಕೊಟ್ಟಿದ್ದಾರೆ. ಈ ಬಗ್ಗೆ ಸುದೀಪ್ ಪತ್ನಿ ಪ್ರಿಯಾ ಶುಭ ಹಾರೈಸಿದ ನಂತರ , ಅವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಕಿಚ್ಚ ಇದು ಹೆಮ್ಮೆಯ ಸಂದರ್ಭ ಎಂದು ಶ್ಲಾಘಿಸಿದ್ದಾರೆ.
ಮೀರಾಬಾಯ್ ಚಾನು 49 ಕೆಜಿ ವಿಭಾಗದ ಸ್ಪರ್ಧೆಯಲ್ಲಿ ಮೀರಾಬಾಯಿ ಚಾನು ಸ್ಪರ್ಧಿಸಿ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದಾರೆ. ಚಾನು ಸ್ನ್ಯಾಚ್‌ನಲ್ಲಿ 87 ಕೆಜಿ ಮತ್ತು ಕ್ಲೀನ್ ಆ್ಯಂಡ್ ಜರ್ಕ್‌ನಲ್ಲಿ 115 ಕೆಜಿ ಭಾರ ಎತ್ತುವ ಮೂಲಕ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಚೀನಾದ ಹೌಸ್ ಜಿಹು ಈ ಸ್ಪರ್ಧೆಯಲ್ಲಿ ಮೊದಲ ಸ್ಥಾನವನ್ನು ಗಳಿಸಿ ಚಿನ್ನದ ಪದಕ ಗೆದ್ದಿದ್ದಾರೆ.
49 ಕೆಜಿ ವಿಭಾಗದ ಸ್ಪರ್ಧೆಯಲ್ಲಿ ಮೀರಾಬಾಯಿ ಚಾನು ಸ್ಪರ್ಧಿಸಿ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದಾರೆ. ಚಾನು ಸ್ನ್ಯಾಚ್‌ನಲ್ಲಿ 87 ಕೆಜಿ ಮತ್ತು ಕ್ಲೀನ್ ಆ್ಯಂಡ್ ಜರ್ಕ್‌ನಲ್ಲಿ 115 ಕೆಜಿ ಭಾರ ಎತ್ತುವ ಮೂಲಕ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಚೀನಾದ ಹೌಸ್ ಜಿಹು ಈ ಸ್ಪರ್ಧೆಯಲ್ಲಿ ಮೊದಲ ಸ್ಥಾನವನ್ನು ಗಳಿಸಿ ಚಿನ್ನದ ಪದಕ ಗೆದ್ದಿದ್ದಾರೆ.








