ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ದೆಹಲಿಗೆ ಹಾರಿದ ಮುರುಗೇಶ್ ನಿರಾಣಿ
ಮುರುಗೇಶ್ ನಿರಾಣಿ ಅವರಿಗೆ ಹೈಕಮಾಂಡ್ ಬುಲಾವ್ ಕೊಟ್ಟಿದೆಯಾ?
ರಾಷ್ಟ್ರೀಯ ನಾಯಕರ ಭೇಟಿ ಅನುಮಾನ
ಬೆಂಗಳೂರು : ಇಂದು ಸಂಜೆ ಹೈಕಮಾಂಡ್ ನಿಂದ ಸೂಚನೆ ಬರಲಿದೆ ಎಂಬ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆ ಬೆನ್ನಲ್ಲೆ ಸಿಎಂ ರೇಸ್ ನಲ್ಲಿರುವ ಸಚಿವ ಮುರುಗೇಶ್ ನಿರಾಣಿ ದೆಹಲಿಗೆ ಹಾರಿದ್ದಾರೆ.
ಈ ಮೂಲಕ ಬಿ.ಎಸ್ ಯಡಿಯೂರಪ್ಪ ನಿರ್ಗಮನದ ಬೆನ್ನಲ್ಲೇ ನಿರಾಣಿ ದೆಹಲಿ ಭೇಟಿ ತೀವ್ರ ಕುತೂಹಲ ಹುಟ್ಟಿಸಿದೆ.
ಆದ್ರೆ ಮುರುಗೇಶ್ ನಿರಾಣಿ ಅವರಿಗೆ ಹೈಕಮಾಂಡ್ ಬುಲಾವ್ ಕೊಟ್ಟಿದೆಯಾ? ಅಥವಾ ಸ್ವಯಂ ದೆಹಲಿಗೆ ಹೊರಟ್ರಾ ಎಂಬ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿಲ್ಲ.
ಮೂಲಗಳ ಪ್ರಕಾರ ಇಂದು ನಿರಾಣಿ ದೆಹಲಿಗೆ ಭೇಟಿ ನೀಡಿದ್ದರೂ, ರಾಷ್ಟ್ರೀಯ ನಾಯಕರ ಭೇಟಿ ಅನುಮಾನವಾಗಿದೆ.
ಯಾಕಂದ್ರೆ ಬಿಜೆಪಿಯ ರಾಷ್ಟ್ರೀಯ ನಾಯಕ ಜಿ.ಪಿ.ನಡ್ಡಾ ಅವರು ಗೋವಾದಲ್ಲಿದ್ದು, ಅಮಿತ್ ಶಾ ಈಶಾನ್ಯ ರಾಜ್ಯಗಳ ಪ್ರವಾಸದಲ್ಲಿದ್ದಾರೆ.
ಹೀಗಾಗಿ ಇಂದು ಮುರುಗೇಶ್ ನಿರಾಣಿ ಯಾರನ್ನ ಭೇಟಿ ಆಗುತ್ತಾರೆ ಎಂಬ ಕುತೂಹಲಕಾರಿ ಪ್ರಶ್ನೆ ಎದ್ದಿದೆ.
ಇನ್ನು ಸಿಎಂ ಬಿಎಸ್ ವೈ ಇಂದು ಬೆಳಿಗ್ಗೆ ಮಾತನಾಡುತ್ತಾ, ಹೈಕಮಾಂಡ್ ನಿಂದ ಸಂಜೆ ವೇಳೆಗೆ ಸಂದೇಶ ಬರಬಹುದು.
ಸಂದೇಶ ಬಂದರೆ ನಾನು ಹೇಳುತ್ತೇನೆ. ಪ್ರಧಾನಿ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಮೇಲೆ ವಿಶ್ವಾಸವಿದೆ ಎಂದಿದ್ದರು.