ಬಿಎಸ್ ವೈ ನಿರ್ಗಮನ : ಉತ್ತರ ಕರ್ನಾಟಕದ ಶಾಸಕರಿಗೆ ಸಿಎಂ ಪಟ್ಟ B S Yediyurappa saaksha tv
ಬೆಂಗಳೂರು : ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಇಂದಿಗೆ ಎರಡು ವರ್ಷ ತುಂಬಿದೆ. ಈ ಹಿನ್ನಲೆಯಲ್ಲಿ ಅವರು ವಿಧಾನಸೌಧದಲ್ಲಿ ಭಾಷಣ ಮಾಡಿದ್ದು, ರಾಜೀನಾಮೆ ಘೋಷಣೆ ಮಾಡಿದ್ದಾರೆ.
ಈ ಮಧ್ಯೆ ನಾಳೆಯೇ ರಾಜ್ಯಕ್ಕೆ ನೂತನ ಸಿಎಂ ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದ್ದು, ಉತ್ತರ ಕರ್ನಾಟಕದ ಲಿಂಗಾಯತ ಶಾಸಕರಿಗೆ ಮುಂದಿನ ಮುಖ್ಯಮಂತ್ರಿ ಪಟ್ಟ ಸಿಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡುವ ಬಗ್ಗೆ ಹೇಳಿದ್ದು, ಮುಂದಿನ ಸಿಎಂ ಬಗ್ಗೆ ಚರ್ಚೆಗಳು ಜೋರಾಗಿವೆ. ಈಗಾಗಲೇ ದೆಹಲಿ ಮಟ್ಟದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ. ಅಲ್ಲದೆ ನಾಳೆ ದೆಹಲಿಯಲ್ಲಿ ಸಂಸದೀಯ ಮಂಡಳಿ ಸಭೆ ನಡೆಯಲಿದೆ. ಈ ವೇಳೆ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಘೋಷಣೆ ಆಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ದೆಹಲಿಯಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ಪ್ರಹ್ಲಾದ್ ಜೋಶಿ ರಹಸ್ಯ ಚರ್ಚೆಯಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ.