ರಾಜ್ಯದ ಸರ್ಕಾರಿ ನೌಕರರ ಡಿಎ ಹೆಚ್ಚಳ
ಬೆಂಗಳೂರು : ರಾಜೀನಾಮೆಗೂ ಮುನ್ನ ರಾಜ್ಯದ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಿಹಿ ಸುದ್ದಿ ನೀಡಿದ್ದಾರೆ.
ರಾಜ್ಯದ ಎಲ್ಲ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಶೇಕಡಾ 11.25 ರಿಂದ 21.50 ಕ್ಕೆ ಹೆಚ್ಚಳ ಮಾಡಿ ಸರ್ಕಾರದ ಆದೇಶ ಪ್ರಕಟಿಸಿದೆ.
ಇನ್ನು ಬಿ.ಎಸ್.ಯಡಿಯೂರಪ್ಪ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಹಲವು ದಿನಗಳಿಂದ ನಡೆಯುತ್ತಿದ್ದ ನಾಯಕತ್ವ ಬದಲಾವಣೆ ವಿಚಾರಕ್ಕೆ ಸ್ಪಷ್ಟತೆ ಸಿಕ್ಕಿದೆ.