ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಬಾರೀ ಇಳಿಕೆ , ಚೇತರಿಕೆ ಪ್ರಮಾಣ ಹೆಚ್ಚಳ..!
ನವದೆಹಲಿ: ದೇಶದಲ್ಲಿ ಕೊರೊನಾ ಮಹಾಮಾರಿಯ ಏರಿಳಿತ ಮುಂದುವರೆದಿದೆ.. ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 29,689 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 415 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 421382ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 398100 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 42363 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 30621469 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಕುಂದ್ರಾ ನಿರ್ಮಿಸಿದ್ದು `ಪೋರ್ನ್ ಚಿತ್ರವಲ್ಲ, ಸಾಫ್ಟ್ ಪೋರ್ನ್’
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








