ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಈ ವಿಡಿಯೋವನ್ನು ದಯವಿಟ್ಟು ಸುಮಲತಾ ಅವರಿಗೆ ತಲುಪಿಸಿ, ನನ್ನ ಅಕ್ಕನಿಗೆ ನ್ಯಾಯ ಕೊಡಿಸಿ : ವಿಜಯಲಕ್ಷ್ಮಿ

Namratha Rao by Namratha Rao
July 27, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಈ ವಿಡಿಯೋವನ್ನು ದಯವಿಟ್ಟು ಸುಮಲತಾ ಅವರಿಗೆ ತಲುಪಿಸಿ, ನನ್ನ ಅಕ್ಕನಿಗೆ ನ್ಯಾಯ ಕೊಡಿಸಿ : ವಿಜಯಲಕ್ಷ್ಮಿ

ಹಲವು ವರ್ಷಗಳಿಂದ ಕಣ್ಮರೆಯಾಗಿದ್ದ  ಬಹುಭಾಷಾ ಕನ್ನಡದ ನಟಿ ವಿಜಯಲಕ್ಷ್ಮಿ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸದಾ ಸುದ್ದಿಯಲ್ಲಿರುವ ಸೆಲೆಬ್ರಿಟಿಯಾಗಿಬಿಟ್ಟಿದ್ದಾರೆ. ಒಮ್ಮೆ ಆತ್ಮಹತ್ಯೆಯ ಹೈ ಡ್ರಾಮಾ , ಮತ್ತೊಮ್ಮೆ ಆರರ್ಥಿಕ ನೆರವಿಗೆ ಬೇಡಿಕೆ , ಮಗದೊಮ್ಮೆ ಕೆಲವರ ವಿರುದ್ಧ ಆರೋಪ , ಕಾಂಟ್ರವರ್ಸಿಗೆ ಬ್ರೇಕ್ ಹಾಕುವುದರಿಂದ ಹಿಡಿದು ಚಿಕ್ಕ ದೊಡ್ಡ ವಿಚಾರಗಳಿಗೂ , ವಿಡಿಯೋ ಮೂಲಕ ಹೇಳಿಕೆಗಳನ್ನ ಕೊಡುತ್ತಿರುವ ವಿಜಯಲಕ್ಷ್ಮಿ ಇದೀಗ ಮಂಡ್ಯ ಸಂಸದೆ ಸುಮಲತಾ ಕುರಿತಾಗಿ ಮಾತನಾಡಿದ್ದಾರೆ..

Related posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

August 11, 2026
varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

August 11, 2026

ಇದೀಗ  ವಿಜಯಲಕ್ಷ್ಮಿ ಸಹೋದರಿ ಉಷಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಹೆಚ್ಚಿನ ಚಿಕಿತ್ಸೆಗೆ ಹಣ ಸಹಾಯ ಮಾಡಿ ಎಂದು ಕೇಳಿಕೊಳ್ಳುತ್ತಿದ್ದಾರೆ.  ಅಲ್ಲದೇ ಉಷಾ ಅವರ ಪತಿ, ಖ್ಯಾತ ನಟಿ ಜಯಪ್ರದಾ ಅವರ ಸಹೋದರ ರಾಜ್ ಬಾಬು ಅವರಿಂದ ವಿಚ್ಛೇದನ ಕೊಡಿಸಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ.

ಜಯಪ್ರದಾ ಅವರನ್ನು ಸಂಪರ್ಕ ಮಾಡಲು ಸಾಧ್ಯವಾಗುತ್ತಿಲ್ಲ, ಸಂಪರ್ಕ ಮಾಡಲು ಯಾರು ಬಿಡುತ್ತಿಲ್ಲ ಎನ್ನುತ್ತಿರುವ ನಟಿ ವಿಜಯಲಕ್ಷ್ಮಿ ಈಗ ಸುಮಲತಾ ಅಂಬರೀಶ್ ಬಳಿ ಸಹಾಯ ಕೇಳಿದ್ದಾರೆ. ವಿಡಿಯೋ ಮೂಲಕ ಮನವಿ ಮಾಡಿರುವ ವಿಜಯಲಕ್ಷ್ಮಿ ಈ ವಿಡಿಯೋ ದಯವಿಟ್ಟು ಸುಮಲತಾ ಅವರಿಗೆ ತಲುಪಿಸಿ ಎಂದಿದ್ದಾರೆ.MP Sumalatha

ಸಹೋದರಿ ಉಷಾ ಅವರಿಗೆ ನ್ಯಾಯ ಕೊಡಿಸಲು ಅವರಿಂದ ಸಾಧ್ಯವಿದೆ. ಅದೇ ನಂಬಿಕೆಯಲ್ಲಿ ಈ ವಿಡಿಯೋ ಮಾಡುತ್ತಿದ್ದೇನೆ ಎಂದು ವಿಜಯಲಕ್ಷ್ಮಿ ಹೇಳಿದ್ದಾರೆ.  ಸಹೋದರಿ ಆರೋಗ್ಯ ಹದಗೆಡುತ್ತಿದೆ, ಪತಿಯಿಂದ ವಿಚ್ಛೇದನ ಕೊಡಿಸಿದರೆ ಚಿಕಿತ್ಸೆಗೆ ಹಣ ಸಿಗುತ್ತೆ ಎನ್ನುತ್ತಿದ್ದಾರೆ. ಉಷಾ ಅವರ ಆರೋಗ್ಯ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗೆ ಹಣಬೇಕು. 15 ವರ್ಷಗಳಿಂದ ಉಷಾ ಚೆನ್ನೈನಲ್ಲಿ ಇದ್ದಾರೆ. ವಿಚ್ಛೇದನಕ್ಕೆ ಇಲ್ಲೆ ಅರ್ಜಿ ಹಾಕಬೇಕು. ಇದಕ್ಕೆ 15 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಬಹುನಿರೀಕ್ಷೆಯ ಸಿನಿಮಾಗಳ ಪಟ್ಟಿ : ಟಾಪ್  10 ರಲ್ಲಿಲ್ಲ RRR ಗೆ ಸ್ಥಾನ..! ನಂ. 1 ನಲ್ಲಿರೋದು ಕನ್ನಡದ ‘ವಿಕ್ರಾಂತ್ ರೋಣ’.!

ಅಲ್ಲದೇ 15 ವರ್ಷಗಳಿಂದ ರಾಜಕೀಯದಲ್ಲಿ ಸಕ್ರೀಯವಾಗಿರುವ ಮಹಿಳೆ, ಬಿಜೆಪಿಯಂತ ಮಹಾನ್ ಪಕ್ಷದಲ್ಲಿ ಇರುವ ಮಹಿಳೆ, ಮಹಿಳೆಯರಿಗೆ ಧ್ವನಿ ಕೊಡ್ತೀನಿ ಅಂತ ಹೇಳಿರುವ ಜಯಪ್ರದಾ, 15 ವರ್ಷಗಳಿಂದ ನಮ್ಮ ಈ ಕುಟುಂಬಕ್ಕೆ ಅನ್ಯಾಯ ಮಾಡಿದ್ದಾರೆ, ಹಿಂಸೆ ಮಾಡಿದ್ದಾರೆ ಎಂದು ವಿಜಯಲಕ್ಷ್ಮಿ ಆರೋಪಿಸಿದ್ದಾರೆ.

ತಮಿಳುನಾಡಿನಲ್ಲಿ ಕೇಳಿದ್ರೆ ಕರ್ನಾಟಕದವರು ಕನ್ನಡದ ಹಿರಿಯರ ಜೊತೆ ಮಾತನಾಡಿ ಎಂದು ಹೇಳುತ್ತಾರೆ. ಏನು ಮಾಡಬೇಕು ಗೊತ್ತಾಗುತ್ತಿಲ್ಲ. ಚಿಕಿತ್ಸೆಗೆ ಹೆಚ್ಚಿನ ಹಣಬೇಕು, ನನ್ನ ಬಳಿ ಹಣವಿಲ್ಲ. ಸಹಾಯ ಕೇಳಿದರೆ ಹೀಯಾಳಿಸುತ್ತಾರೆ. ಕೆಲಸಕ್ಕೆ ಹೋಗು ಎನ್ನುತ್ತಿದ್ದಾರೆ. ಆದರೆ ಕೆಲಸಕ್ಕೆ ಹೋಗಲು ಆಗಲ್ಲ, ಸದಾ ಜೊತೆಯಲ್ಲಿದ್ದು ಅಕ್ಕನ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಅಲ್ಲದೇ ಮಗನ ನೋಡಲು ಬಿಡಲ್ಲ. 15 ವರ್ಷಗಳಾಗಿದೆ ಅಕ್ಕ ಮಗನ ನೋಡದೆ. ಕರ್ನಾಟಕದಲ್ಲಿ ಎಲ್ಲರಿಗೂ ನ್ಯಾಯ ಸಿಕ್ಕಿದೆ. ಉಷಾ ಅವರಿಗೆ ಯಾಕೆ ಹೀಗೆ. ಜಯಪ್ರದಾ ಅವರು ಯಾಕೆ ಹೀಗೆ ಮಾಡುತ್ತಿದ್ದಾರೆ ಎನ್ನುವುದು ಗೊತ್ತಾಗುತ್ತಿಲ್ಲ ಎಂದಿದ್ದಾರೆ.

ಅಶ್ಲೀಲ ವಿಡಿಯೋ ನಿರ್ಮಾಣ : ನ್ಯಾಯಾಂಗ ಬಂಧನದಲ್ಲಿ ಕುಂದ್ರಾ – ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ನಟಿ..!

ಇನ್ನೂ ಸುಮಲತಾ ಅಂಬರೀಶ್ ಅವರನ್ನು ಸಂಪರ್ಕ ಮಾಡಿ ಉಷಾ ಅವರ ಈ ಪರಿಸ್ಥಿತಿ ತಿಳಿಸಿ, ಜಯಪ್ರದಾ ಏನೆಲ್ಲ ಹಿಂಸೆ ಕೊಟ್ಟಿದ್ದಾರೆ ಎಲ್ಲಾ ತಿಳಿಸಬೇಕು. ಅಂಬರೀಶ್ ಅವರನ್ನು ಸಂಪರ್ಕ ಮಾಡಲು ನನ್ನ ಬಳಿ ಆಗಿಲ್ಲ. ಆದರೀಗ ಸುಮಲತಾ ಅಂಬರೀಶ್ ಅವರಿಗೆ ಈ ವಿಡಿಯೋ ತಲುಪಿಸಿ. ನಾನು ಸಂಪರ್ಕ ಮಾಡಲು ಪ್ರಯತ್ನ ಪಟ್ಟರೆ ಖಂಡಿತ ಯಾರು ಬಿಡಲ್ಲ  ಎಂದು ಅಳಲು ತೋಡಿಕೊಂಡಿದ್ದಾರೆ.

ಅಲ್ಲದೇ ‘ಸುಮಲತಾ ಮೇಡಮ್, ಜಯಪ್ರದಾ ಬಳಿ ಮಾತನಾಡಿದ್ರೆ ಖಂಡಿತ ಆಗುತ್ತೆ. ಆ ನಂಬಿಕೆಯಲ್ಲಿ ಈ ವಿಡಿಯೋ ಮಾಡಿದ್ದೀನಿ’ ಎಂದು ವಿಜಯಲಕ್ಷ್ಮಿ ಹೊಸ ವಿಡಿಯೋ ಮೂಲಕ ಸುಮಲತಾ ಅಂಬರೀಶ್ ಬಳಿ ಮನವಿ ಮಾಡಿದ್ದಾರೆ. ಈ ಮೂಲಕ ಮತ್ತೊಮ್ಮೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯ ಟಾಪಿಕ್ ಆಗಿದ್ದಾರೆ.

Tags: SandalwoodSumalathavijayalakshmi
ShareTweetSendShare
Join us on:

Related Posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

by admin
August 11, 2026
0

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ 'ಸ್ಲಮ್ ಡಾಗ್' ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್; ‌ಪವರ್‌ಫುಲ್ ಅಧಿಕಾರಿ 'ಗೌರಿ ಹೆಗ್ಡೆ' ಪಾತ್ರದಲ್ಲಿ ಟಬು!...

varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

by admin
August 11, 2026
0

ಅಷ್ಟ ಐಶ್ವರ್ಯ ಪಡೆಯಲು ತಾಂತ್ರಿಕ ಪರಿಹಾರ ಅಷ್ಟ ಲಕ್ಷ್ಮಿ ನಾಣ್ಯಗಳು ಶುಕ್ರವಾರ ಮಹಾಲಕ್ಷ್ಮಿ ದೇವಿಗೆ ಶುಭ ದಿನ. ಆ ಶುಕ್ರವಾರ ಬರುವ ಶುಕ್ರ ಹೊರೆಯ ಸಮಯದಲ್ಲಿ ನಾವು...

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

by admin
August 11, 2026
0

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ. 28-08-2026 ರಂದು ನಗದು ಅಗತ್ಯವನ್ನು ಪೂರೈಸಲು...

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram