ಉತ್ತರಪ್ರದೇಶ : ತಮ್ಮನ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಉತ್ತರಪ್ರದೇಶ : ಉತ್ತರ ಪ್ರದೇಶ : ಉತ್ತರ ಪ್ರದೇಶದಲ್ಲಿ ಮಹಿಳೆಯರು ಭಯದಲ್ಲಿ ಬದುಕುವಂತಾಗಿದೆ.. ದಿನಬೆಳಗಾದ್ರೆ , ಮಕ್ಕಳು ಅಪ್ರಾಪ್ತರು , ಮಹಿಳೆಯರು , ವಿವಾಹಿತರು , ವೃದ್ಧೆಯರ ಮೇಲೂ ಕಾಮ ಪಿಸಾಚಿಗಳು ಅಟ್ಟಹಾಸ ಮೆರೆಯುತ್ತಾ ಇದ್ದಾರೆ.. ಆದ್ರೂ ಇಂತಹ ಪ್ರಕರಣಗಳು ಮಾತ್ರ ಕಡಿಮೆಯಾಗದೇ ದಿನೇ ದಿನೇ ಹೆಚ್ಚಾಗ್ತಲೇ ಇರೋದು ಅಲ್ಲಿನ ಕಾನೂನು ವ್ಯವಸ್ಥೆ ಯಾವ ರೀತಿ ಇರಬಹುದು ಎಂಬುದನ್ನ ತೋರಿಸುತ್ತೆ. ಯೋಗಿ ರಾಜ್ಯದಲ್ಲಿ ಇದೀಗ ಮತ್ತೊಂದು ನಾಚಿಕೆಗೇಡು ಎನಿಸುವಂತಹ ಘಟನೆ ಬೆಳಕಿಗೆ ಬಂದಿದೆ..
15 ವರ್ಷದ ಅಪ್ರಾಪ್ತ ಬಾಲಕಿಯನ್ನು ಆಕೆಯ ತಮ್ಮನ ಎದುರಲ್ಲೇ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದ್ದು, ಮೂವರನ್ನು ಬಂಧಿಸಲಾಗಿದೆ.. ಈ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದೆ. ಬಾಲಕಿ ಪೋಷಕರು ಕಾರ್ಯಕ್ರಮ ನಿಮಿತ್ತ ಬೇರೆ ಹಳ್ಳಿಗೆ ಹೊರಟಿದ್ದಾಗ, ಪಕ್ಕದ ಮನೆಯವರು ತಮ್ಮ ಮನೆಗೆ ಪ್ರವೇಶಿಸಿ ಮಕ್ಕಳು ಮಲಗಿದ್ದನ್ನು ನೋಡಿದ್ದಾರೆ ಎಂದು ಬಾಲಕಿಯ ತಂದೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಆರೋಪಿ ಬಾಲಕಿಗೆ ಗನ್ ತೋರಿಸಿ ತನ್ನ ಮೂವರು ಸ್ನೇಹಿತರೊಂದಿಗೆ ಮನೆ ಒಳಗೆ ನುಗ್ಗಿದ್ದಾನೆ. ನಂತರ ಬಾಲಕಿಯ 12 ವರ್ಷದ ಸಹೋದರನ ಎದುರೇ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ಕೃತ್ಯದ ವಿಡಿಯೋವನ್ನು ಸಹ ಚಿತ್ರೀಕರಿಸಿದ್ದು, ಪೊಲೀಸರಿಗೆ ದೂರು ನೀಡಿದರೆ ಅದನ್ನು ವೈರಲ್ ಮಾಡುವುದಾಗಿ ಬಾಲಕಿಗೆ ಬೆದರಿಕೆ ಹಾಕಿದ್ದಾರೆ. ಬಾಲಕಿಯ ವೈದ್ಯಕೀಯ ವರದಿಯಲ್ಲಿ ಅತ್ಯಾಚಾರ ಎಸಗಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.








