ಮಣ್ಣಿನ ಮಕ್ಕಳ ಉನ್ನತ ಶಿಕ್ಷಣಕ್ಕೆ 1000 ಕೋಟಿ ರೂ. : ಸಿಎಂ ಘೋಷಣೆ
ಬೆಂಗಳೂರು : ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೊದಲ ದಿನವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸ ಘೋಷಣೆಗಳನ್ನು ಮಾಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ 1 ಸಾವಿರ ಕೋಟಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
ರೈತರ ಮಕ್ಕಳು ಕಲಿಕೆಯಿಂದ ವಂಚಿತರಾಗಬಾರದು. ಹೀಗಾಗಿ ಶಿಷ್ಯ ವೇತನ ಜಾರಿ ಮಾಡಲಾಗುವುದು ಎಂದು ಮಣ್ಣಿನ ಮಕ್ಕಳಿಗೆ ಬಂಪರ್ ಕೊಡುಗೆ ನೀಡಿದ್ದಾರೆ.
ಅಲ್ಲದೆ ಹಿರಿಯ ನಾಗರೀಕರಿಗೆ ನೀಡಲಾಗುತ್ತಿದ್ದಂತ ಸಂದ್ಯಾ ಸುರಕ್ಷಾ ಯೋಜನೆಯ ಫಲಾನುಭವಿಗಳಿಗೆ ರೂ.1,000ದಿಂದ ರೂ.1,200ಕ್ಕೆ ಹೆಚ್ಚಳ ಮಾಡುವುದಾಗಿ ತಿಳಿಸಿದ್ದಾರೆ.
ವಿಧವಾ ವೇತನ ಹಾಲಿ ಇರುವಂತ 600 ರೂ ಗಳನ್ನು 800ಕ್ಕೆ ಹೆಚ್ಚಳ. ಅಂಗವಿಕಲರ ವೇತನದಡಿಯಲ್ಲಿ ಶೇ.40 ರಿಂದ 75ರಷ್ಟು ಅಂಗವಿಕಲರಿಗೆ ರೂ.600ರಿಂದ 800ಕ್ಕೆ ಏರಿಕೆ ಮಾಡಲಾಗುತ್ತಿದೆ.
3.66 ಸಾವಿರ ಅಂಗವಿಕಲರಿಗೆ ಇದರಿಂದ ಪ್ರಯೋಜನ ಆಗಲಿದೆ ಎಂಬುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.