ಬೆಳಗಾವಿ : ಕೋವಿಡ್-೧೯ ಸೋಂಕು ತಗುಲಿದ್ದ ಹಿರೇಬಾಗೇವಾಡಿಯ ದಂಪತಿ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ 50 ವರ್ಷದ ವ್ಯಕ್ತಿ(ಪಿ-182) ಹಾಗೂ ಅವರ ಪತ್ನಿಯಾಗಿರುವ40 ವರ್ಷದ (ಪಿ-192) ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ.
ಇವರು ಏ.೩ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು ೫೪ ಜನರಲ್ಲಿ ಸೋಂಕು ಪತ್ತೆಯಾಗಿದೆ.
ಈ ಪೈಕಿ ನಾಲ್ಕು ಜನರನ್ನು ಈಗಾಗಲೇ ಸರ್ಕಾರದ ಮಾರ್ಗಸೂಚಿಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿರುತ್ತದೆ. ಇದೀಗ ಒಟ್ಟಾರೆ ಆರು ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ತಿಳಿಸಿದ್ದಾರೆ.








