ಸಚಿವಾಕಾಂಕ್ಷಿಗಳಿಗೆ ಸಿಹಿ ಸುದ್ದಿ : ಶೀಘ್ರದಲ್ಲೇ ಕ್ಯಾಬಿನೆಟ್ ರಚನೆ
ಬೆಂಗಳೂರು : ಮಂತ್ರಿಗಾರಿಗಾಗಿ ಜಾತಕ ಪಕ್ಷಿಗಳಂತೆ ಕಾಯುತ್ತಿರುವ ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ಶೀಘ್ರದಲ್ಲಿಯೇ ಕ್ಯಾಬಿನೆಟ್ ರಚಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಪಕ್ಷದ ವರಿಷ್ಠರ ಪ್ರದಕ್ಷಿಣೆ ಹಾಕುತ್ತಿದ್ದು, ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇನ್ನೊಂದು ವಾರದಲ್ಲಿ ಸಚಿವ ಸಂಪುಟ ರಚನೆ ಮಾಡುವುದಾಗಿ ತಿಳಿಸಿದ್ದಾರೆ.
ಅಲ್ಲದೆ ಜಿಎಸ್‍ಟಿ ಮರುಪಾವತಿಗೆ ಸಂಬಂಧಿಸಿದಂತೆ ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡುವುದಾಗಿ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಸುಮ್ನೆ ಟೈಂ ಪಾಸ್ ಗೆ ಸಿಎಂ ಆದ್ರಾ ಬಾಮ್ಮಾಯಿ ಸಾಹೇಬ್ರೆ..?
ರಾಮೇಶ್ವರಕ್ಕೆ ಹೋದ್ರು ಶನೇಶ್ವರನ ಕಾಟ ತಪ್ಪಲಿಲ್ಲ ಎಂಬಂತೆ ಮುಖ್ಯಮಂತ್ರಿ ಬದಲಾದರೂ ರಾಜ್ಯದ ಜನರ ಹಣೆಬರಹ ಬದಲಾಗೋ ಲಕ್ಷಣಗಳೇ ಕಾಣುತ್ತಿಲ್ಲ. ಒಂದು ಕಡೆ ಕೊರೊನಾ ಮೂರನೇ ಅಲೆಯ ಎಚ್ಚರಿಕೆಯ ಗಂಟೆ ಬಾರಿಸುತ್ತಿದೆ. ಇನ್ನೊಂದೆಡೆ ಜಲಾಸುರ ಉತ್ತರ ಕರ್ನಾಟಕವನ್ನು ನುಂಗುತ್ತಾ ಬರುತ್ತಿದ್ದಾನೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯದ ಹಿತ ಕಾಯಬೇಕಿದ್ದ ರಾಜ್ಯ ಸರ್ಕಾರ ಮಾತ್ರ ಇನ್ನೂ ಟೇಕ್ ಆಫ್ ಆಗ್ತಾನೆ ಇಲ್ಲ..!!
ಬೊಮ್ಮಾಯಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿ ಇಷ್ಟು ದಿನ ಆದ್ರೂ ಇನ್ನೂ ಸಚಿವ ಸಂಪುಟ ರಚನೆ ಆಗಿಲ್ಲ. ಕಡೇ ಪಕ್ಷ ಸಚಿವರ ಹೆಸರಗಳು ಕೂಡ ಫೈನಲ್ ಆಗಿಲ್ಲ ಎಂದು ಹೇಳಲಾಗುತ್ತಿದೆ.