ಕನ್ನಡ ಕಡೆಗಣನೆ | ಕನ್ನಡಿಗರಿಗೆ ಶಾಕ್ ನೀಡಿ ನಮೋ ಸರ್ಕಾರ Kannada saaksha tv
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕನ್ನಡವನ್ನು ಕಡೆಗಣಿಸಿ ಮತ್ತೆ ಕನ್ನಡಿಗರಿಗೆ ಶಾಕ್ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು, ಪ್ರಾದೇಶಿಕ ಭಾಷೆಗಳಲ್ಲಿ ಎಂಜಿನಿಯರಿಂಗ್ ಬೋಧನೆ ಮಾಡಲಾಗುವುದು ಎಂದು ತಿಳಿಸಿದ್ದು, ಅದರಲ್ಲಿ ಕನ್ನಡವನ್ನು ಕಡೆಗಣಿಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿಯ ಮೊದಲ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಾತನಾಡಿ ಮೋದಿ, 8 ರಾಜ್ಯಗಳಲ್ಲಿ 14 ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರಾದೇಶಿಕ ಭಾಷೆಗಳಲ್ಲಿ ಎಂಜಿನಿಯರಿಂಗ್ ಬೋಧನೆ ಮಾಡಲಾಗುವುದು ಎಂದು ತಿಳಿಸಿದ್ದರು. ಆದರೆ ಆ ಭಾಷೆಗಳ ಸಾಲಿನಲ್ಲಿ ಕನ್ನಡವನ್ನು ಕೈಬಿಡಲಾಗಿದೆ.
ಹಿಂದಿ, ತಮಿಳು, ತೆಲುಗು, ಮರಾಠಿ ಮತ್ತು ಬಂಗಾಳಿ ಎಂಬ 5 ಭಾರತೀಯ ಭಾಷೆಗಳಲ್ಲಿ ಎಂಜಿನಿಯರಿಂಗ್ ಬೋಧನೆ ಮಾಡಲಾಗುವುದು ಎಂದು ಪ್ರಧಾನಿ ತಿಳಿಸಿದ್ದಾರೆ.









