“ಕೇಂದ್ರದಿಂದ ಹಣ ಬರುತ್ತಿಲ್ಲ” : ಸಿದ್ದು ಹೇಳಿಕೆಗೆ ಪ್ರತಾಪ್ ಸಿಂಹ ಟಾಂಗ್ Siddaramaiah saaksha tv
ಮೈಸೂರು : ರಾಜ್ಯಕ್ಕೆ ಅಗತ್ಯ ಅನುದಾನವನ್ನು ಕೇಂದ್ರ ಸರ್ಕಾರ ನೀಡುತ್ತ ಬಂದಿದೆ. ಸಿದ್ದರಾಮಯ್ಯ ರಾಜಕೀಯಕ್ಕಾಗಿ ಮಾತನಾಡುವುದನ್ನು ಬಿಡಬೇಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ರಾಜ್ಯದ ಪಾಲನ್ನು ಕೇಂದ್ರ ಸರ್ಕಾರ ಕೊಡುತ್ತಿಲ್ಲ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ಎಲ್ಲ ಗೊತ್ತಿದ್ದೂ ಕೂಡ ರಾಜಕೀಯ ಮಾತನಾಡುತ್ತಾರೆ.
ಅವರ ಹೇಳಿಕೆಯ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. 13 ಬಾರಿ ಬಜೆಟ್ ಮಂಡಿಸಿದ ಅವರಿಗೆ ಎಲ್ಲ ತಿಳಿದಿರುತ್ತದೆ ಎಂದರು.
ಇನ್ನು ಹೆದ್ದಾರಿ ಕೆಲಸಕ್ಕೆ 95 ಸಾವಿರ ಕೋಟಿ ರೂಪಾಯಿ ಕೊಟ್ಟಿರುವುದು ಕೇಂದ್ರ ಸರ್ಕಾರ.
ಬೆಂಗಳೂರು-ಮೈಸೂರು ಹೆದ್ದಾರಿ ಅಭಿವೃದ್ಧಿಗೆ 8096 ಕೋಟಿ ರೂಪಾಯಿ ಕೊಟ್ಟಿದೆ.
ಮೇಕೆದಾಟು ಯೋಜನೆಗೆ ಡಿಪಿಆರ್ ಮಾಡುತ್ತಿರುವುದು ಕೇಂದ್ರ ಸರ್ಕಾರ ಎಂದು ಟಾಂಗ್ ನೀಡಿದರು.









