ನಾಳೆಯಿಂದ ಖಾಸಗಿ ಶಾಲೆ ಆರಂಭಿಸುವ ಬಗ್ಗೆ ರುಪ್ಸಾ ಮಹತ್ವದ ನಿರ್ಧಾರ
ಬೆಂಗಳೂರು : ರಾಜ್ಯದಲ್ಲಿ ನಾಳೆಯಿಂದ ಖಾಸಗಿ ಶಾಲೆಗಳನ್ನು ಆರಂಭಿಸುವ ಬಗ್ಗೆ ರುಪ್ಸಾ ಮಹತ್ವ ನಿರ್ಧಾರವನ್ನು ತೆಗೆದುಕೊಂಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆ ಶಾಲೆ ಆರಂಭಿಸುವ ನಿರ್ಧಾರದಿಂದ ಹಿಂದೆ ಸರಿದಿದೆ.
ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವೆಯೂ ರಾಜ್ಯದಲ್ಲಿ ನಾಳೆಯಿಂದ ಖಾಸಗಿ ಶಾಲೆಗಳನ್ನು ಆರಂಭಿಸಲು ರುಪ್ಸಾ ನಿರ್ಧಾರ ತೆಗೆದುಕೊಂಡಿತ್ತು. ಆದ್ರೆ ಇದೀಗ ಮುಖ್ಯಮಂತ್ರಿಗಳ ಸಲಹೆ ಮೇರೆಗೆ ಆ ನಿರ್ಧಾರವನ್ನು ಕೈಬಿಟ್ಟಿದೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿದ ರುಪ್ಸಾ ಸಂಘಟನೆ ಅಧ್ಯಕ್ಷ ಹಾಲನೂರು ಲೇಪಾಕ್ಷಿ, ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ರಾಜ್ಯದಲ್ಲಿ ಅನುದಾನ ರಹಿತ ಖಾಸಗಿ ಶಾಳೆಗಳ ಒಕ್ಕೂಟದಿಂದ ಶಾಳೆ ಆರಂಭಿಸುವ ನಿರ್ಧಾರ ಕೈಬಿಡಲಾಗಿದೆ.
ಶಾಲೆ ಆರಂಭದ ಬಗ್ಗೆ ಚರ್ಚಿಸಲು ಸಿಎಂ ಬಸವರಾಜ ಬೊಮ್ಮಾಯಿ ಅವರು ಕರೆ ಮಾಡಿದ್ದಾರೆ. ಸಿಎಂ ಭೇಟಿ ಮಾಡಿ ಶಾಲೆ ಆರಂಭದ ಬಗ್ಗೆ ಚರ್ಚೆ ನಡೆಸಲಾಗುವುದು. ಹೀಗಾಗಿ ನಾಳೆಯಿಂದ ಖಾಸಗಿ ಶಾಲೆಗಳ ಆರಂಭದ ನಿರ್ಧಾರ ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ.









