ವೊಡಾಫೋನ್ ಕಂಪನಿಗೆ ಟ್ಯಾಕ್ಸ್ – ಭಾರತದ ಸರ್ಕಾರದ ಅರ್ಜಿ ವಿಚಾರಣೆ ಸೆಪ್ಟೆಂಬರ್ ಗೆ ನಿಗದಿ
ವೊಡಾಫೋನ್ ಸಮೂಹದ ಪರವಾಗಿ ಪೂರ್ವಾನ್ವಯ ತೆರಿಗೆಗೆ ಸಂಬಂಧಿಸಿ ಅಂತರರಾಷ್ಟ್ರೀಯ ಮಧ್ಯಸ್ಥಿಕೆ ನ್ಯಾಯಮಂಡಳಿ ನೀಡಿರುವ ಆದೇಶವನ್ನು ಪ್ರಶ್ನಿಸಿ ಭಾರತ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸಿಂಗಪುರದ ಹಿರಿಯ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ. ಈ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ ಗೆ ನಿಗದಿ ಮಾಡಲಾಗಿದೆ. ವೊಡಾಫೋನ್ ಕಂಪನಿಯು 22,100 ಕೋಟಿ ರೂ. ತೆರಿಗೆ ಮೊತ್ತ ಪಾವತಿಸಬೇಕು ಎಂದು ಭಾರತ ಸರ್ಕಾರ ಬೇಡಿಕೆ ಇಟ್ಟಿತ್ತು.
ಇದನ್ನು ಅಂತರರಾಷ್ಟ್ರೀಯ ಮಧ್ಯಸ್ಥಿಕೆ ನ್ಯಾಯಮಂಡಳಿಯು ಸೆಪ್ಟೆಂಬರ್ 25ರಂದು ತಿರಸ್ಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಭಾರತ ಸರ್ಕಾರವು ಸಿಂಗಪುರ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಬ್ರಿಟಿಷ್ ಆಯಿಲ್ ಮತ್ತು ಕೈರ್ನ್ ಎನರ್ಜಿಗೆ 1.2 ಶತಕೋಟಿ ಡಾಲರ್ ಹಿಂತಿರುಗಿಸುವಂತೆ ದಿ ಹೇಗ್ ನ ಮಧ್ಯಸ್ಥಿಕೆ ನ್ಯಾಯಮಂಡಳಿಯು ಭಾರತ ಸರ್ಕಾರಕ್ಕೆ ಆದೇಶ ನೀಡಿತ್ತು. ಈ ಆದೇಶವನ್ನೂ ಭಾರತ ಪ್ರಶ್ನಿಸಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.







