ಬೆಂಗಳೂರು: ರಾಜ್ಯದಲ್ಲಿ ಕೊರೊನಾಸುರನ ಆರ್ಭಟ ಮುಂದುವರಿದಿದ್ದು, ಸೋಂಕಿತರ ಸಂಖ್ಯೆ 511ಕ್ಕೆ ಏರಿದೆ. ಅದರಲ್ಲಿ 19 ಮಂದಿ ಸಾವನ್ನಪ್ಪಿದ್ದು, 188 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡಗುಡೆ ಮಾಡಿದ್ದು, ನಿನ್ನೆ ಸಂಜೆ 5 ಗಂಟೆಯಿಂದ ಇಂದು ಮಧ್ಯಾಹ್ನ 12ಗಂಟೆಯವರೆಗೆ ರಾಜ್ಯದಲ್ಲಿ ಎಂಟು ಹೊಸ ಕೊರೊನಾ ಪ್ರಕರಣಗಳು ಕಂಡುಬಂದಿವೆ ಎಂದು ತಿಳಿಸಿದೆ.
ನಿನ್ನೆ ಸಂಜೆಯಿಂದ ಇಲ್ಲಿಯವರೆಗೆ ಬೆಂಗಳೂರು ನಗರದಲ್ಲಿ 1, ಮಂಡ್ಯದ ನಾಗಮಂಗಲದಲ್ಲಿ 1, ದಕ್ಷಿಣ ಕನ್ನಡದಲ್ಲಿ ಇಬ್ಬರು, ಬಾಗಲಕೋಟೆ ಮತ್ತು ವಿಜಯಪುರಗಳಲ್ಲಿ ತಲಾ ಇಬ್ಬರು ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಎಂಟು ಮಂದಿಯಲ್ಲಿ ಬೆಂಗಳೂರು ನಗರದಲ್ಲಿ ಪತ್ತೆಯಾದ ಕೊರೊನಾ ಸೋಂಕಿತನಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ.








