ಕೇರಳ ಹಾಗೂ ಮಹಾರಾಷ್ಟ್ರ ದಿಂದ ಬಂದವರಿಗೆ ಆರ್ ಟಿ ಪಿಸಿ ಆರ್ ಟೆಸ್ಟ್ ಕಡ್ಡಾಯ..!
ಕೇರಳ ಹಾಗೂ ಮಹಾರಾಷ್ಟ್ರ ದಿಂದ ಬಂದವರಿಗೆ ಆರ್ ಟಿ ಪಿಸಿ ಆರ್ ಟೆಸ್ಟ್ ಕಡ್ಡಾಯ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಹೇಳಿದ್ದಾರೆ. ಟೆಸ್ಟ್ ಇಲ್ಲದೇ ಬರುವವರು ಸಾಂಸ್ಥಿಕ ಕ್ವಾರಂಟೈನ್ ಬರಲೇ ಬೇಕು . ಸಾಂಸ್ಥಿಕ ಕ್ವಾರಂಟೈನ್ ಗೆ ಕೇರಳ ಪ್ರಯಾಣಿಕರ ಇಡಲು ಶಿಫಾರಸ್ಸು ಮಾಡಲಾಗಿದೆ. ಈ ಬಗ್ಗೆ ಬಿಬಿಎಂಪಿ&ಪೊಲೀಸ್ ಇಲಾಖೆ ಜಂಟಿ ಕರ‍್ಯಚರಣೆ ಮಾಡಲಿದೆ. ವಲಯ ಮಟ್ಟದ ಅಧಿಕಾರಿಗಳು ಸಾಂಸ್ಥಿಕ ಕ್ವಾರಂಟೈನ್ ಗೆ ಸೂಚನೆ ನೀಡಲಾಗಿದೆ. ಇಂದಿನಿಂದ ಕೇರಳ ಹಾಗೂ ಮಹಾರಾಷ್ಟ್ರದಿಂದ ಬಂದವರಿಗೆ ಕ್ವಾರಂಟೈನ್ ಕಡ್ಡಾಯ ಎಂದು ತಿಳಿಸಿದ್ದಾರೆ.
ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಮಿತಿ ಮೀರಿದ ಕೋವಿಡ್ ಹಾವಳಿ – ರಾಜ್ಯಕ್ಕೂ ಕಂಟಕ , ಹೈ ಅಲರ್ಟ್ ಆದದ ಬಿಬಿಎಂಪಿ
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸರ‍್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನರ‍್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನರ‍್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








