ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 44,643 ಕೇಸ್ ಪತ್ತೆ, 464 ಜನ ಸಾವು
ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 44,643 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 464 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 10 ಲಕ್ಷದ 15 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,26,754 ಆಗಿದೆ.
ಕಳೆದ 24 ಗಂಟೆಗಳಲ್ಲಿ 41,096 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 3 ಕೋಟಿ 10 ಲಕ್ಷದ 15 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 4 ಲಕ್ಷದ 14 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ರೆಪೋ ದರ, ರಿವರ್ಸ್ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡ RBI
ಭಾರತದಲ್ಲಿ ಗುಣಮುಖ ಪ್ರಮಾಣ 97.36 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.34 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 16.40 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 47.65 ಕೋಟಿ ಟೆಸ್ಟ್ಗಳನ್ನ ನಡೆಸಿದಂತಾಗಿದೆ. ದೇಶದಲ್ಲಿ ನಿನ್ನ 57.97 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 49.53 ಕೋಟಿಗೂ ಅಧಿಕ ಡೋಸ್ ಲಸಿಕೆ ಹಾಕಿದಂತಾಗಿದೆ.