ಸಿ.ಟಿ.ರವಿ `ಇಡೀ ರಾಷ್ಟ್ರದ ಮಹಾಮಂತ್ರಿ’ : ಬೆಳ್ಳಿ ಪ್ರಕಾಶ್
ಚಿಕ್ಕಮಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರನ್ನು ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಹಾಡಿ ಹೊಗಳಿದ್ದು, ಇಡೀ ರಾಷ್ಟ್ರದ ಮಹಾಮಂತ್ರಿ ಇರೋದು ನಮ್ಮ ಜಿಲ್ಲೆಯಲ್ಲಿ.
ಅವರಿಂದ ಇಡೀ ಜಿಲ್ಲೆಯಲ್ಲಿ ಏನು ಬೇಕಾದರೂ ಆಗಬಹುದು. ಆ ಮಹಾಮಂತ್ರಿ ಜಿಲ್ಲೆ, ರಾಜ್ಯ, ರಾಷ್ಟ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಯೋಚನೆ ಮಾಡುತ್ತಾರೆ. ಸಿ.ಟಿ.ರವಿ ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿದ್ದಾರೆ ಎಂದಿದ್ದಾರೆ.
ಕಡೂರು ತಾಲೂಕಿನ ಸಖರಾಯಪಟ್ಟಣದ ಐತಿಹಾಸಿಕ ಅಯ್ಯನಕೆರೆ ಕೆರೆಗೆ ಬಾಗಿಣ ಅರ್ಪಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿ ಟಿ ರವಿ, ಇಡೀ ರಾಷ್ಟ್ರದ ಮಹಾಮಂತ್ರಿ ಇರೋದೆ ನಮ್ಮ ಜಿಲ್ಲೆಯಲ್ಲಿ.
ಆ ಮಹಾಮಂತ್ರಿ ಜಿಲ್ಲೆ, ರಾಜ್ಯ, ರಾಷ್ಟ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಯೋಚನೆ ಮಾಡುತ್ತಾರೆ. ಸಿ.ಟಿ.ರವಿ ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿದ್ದಾರೆ.
ಅವರ ವಿಶೇಷ ಪ್ರಯತ್ನದಿಂದ ಜಿಲ್ಲೆಯಲ್ಲಿ ಏನು ಬೇಕಾದರೂ ಆಗಬಹುದು ಅನ್ನೋ ಸನ್ನಿವೇಶ ನಿರ್ಮಾಣವಾಗಿದೆ ಎಂದರು.
ಇದೇ ವೇಳೆ ಸಚಿವ ಸಂಪುಟ ಬಗ್ಗೆ ಮಾತನಾಡಿ, ರಾಜ್ಯದಲ್ಲಿ ಚಿಕ್ಕಮಗಳೂರು ಜಿಲ್ಲೆ ಬಲಿಷ್ಠ ಜಿಲ್ಲೆಯಾಗುತ್ತಿದೆ. ಸಂಪುಟ ರಚಿಸುವಾಗ ಚಿಕ್ಕಮಗಳೂರು ಜಿಲ್ಲೆಯನ್ನು ಕಡೆಗಣಿಸಿಲ್ಲ.
ಚಿಕ್ಕಮಗಳೂರು ಜಿಲ್ಲೆಗೆ ಸಂಪುಟದಲ್ಲಿ ಅನ್ಯಾಯವಾಗಿಲ್ಲ ಎಂದು ಪಕ್ಷವನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.









