ಕೊರೊನಾ ರಿಪೋರ್ಟ್ ( corona-report ) : ಇಂದು 39,070 ಹೊಸ ಕೇಸ್ ಪತ್ತೆ
ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 39,070 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 491 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,19,34,455 ಆಗಿದೆ. 4,27,862 ಮಂದಿ ಮೃತಪಟ್ಟಿದ್ದಾರೆ.
ಇನ್ನು ಕಳೆದ 24 ಗಂಟೆಗಳಲ್ಲಿ 43,910 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ಇದುವರೆಗೆ 3,10,99,771 ಮಂದಿ ಸೋಂಕು ಮುಕ್ತರಾಗಿದ್ದಾರೆ. ದೇಶದಲ್ಲಿನ್ನೂ 4,06,822 ಸಕ್ರಿಯ ಕೇಸ್ ಗಳಿವೆ ಎಂದು ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.









