ಸಂಪುಟ ದರ್ಜೆ ಸ್ಥಾನಮಾನ ನಿರಾಕರಿಸಿದ ಬಿಎಸ್ ವೈ
ಬೆಂಗಳೂರು : ತಮ್ಮನ್ನು ಮುಖ್ಯಮಂತ್ರಿ ಪಟ್ಟಕ್ಕೇರಿಸಿದ ಬಿಎಸ್ ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ದರ್ಜೆಯ ಸ್ಥಾನ ನೀಡಿದ್ದಾರೆ. ಆದ್ರೆ ಇದನ್ನು ಬಿ ಎಸ್ ಯಡಿಯೂರಪ್ಪ ನಿರಾಕರಿಸಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಯಡಿಯೂರಪ್ಪ, ಸರ್ಕಾರದ ಆದೇಶದಲ್ಲಿ ಬಿಎಸ್ ಯಡಿಯೂರಪ್ಪ ಮಾನ್ಯ ನಿಕಟ ಪೂರ್ವ ಮುಖ್ಯಮಂತ್ರಿ ಇವರಿಗೆ ನೂತನವಾಗಿ ಪದಾರೋಹಣ ಮಾಡಿದ ಮುಖ್ಯಮಂತ್ರಿಗಳು ಪದವಿಯ ಅವಧಿ ಇರುವವರೆಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಿ ಆದೇಶಿಸಿದ್ದು,
ಈ ಹಿಂದೆ ನಿಕಟ ಪೂರ್ವ ಮುಖ್ಯಮಂತ್ರಿಗಳಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳು ಮಾತ್ರ ನನಗೆ ನೀಡಬೇಕಾಗಿ ಹಾಗೂ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕೆಂದು ಮನವಿ ಮಾಡಿಕೊಂಡಿದ್ದಾರೆ.









