ಮತ್ತೆ ದೆಹಲಿ ದಂಡಯಾತ್ರೆ ಶುರು ಮಾಡಿದ `ಸೈನಿಕ’ c p yogeshwar
ನವದೆಹಲಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಮತ್ತೆ ದೆಹಲಿ ದಂಡಯಾತ್ರೆ ಶುರು ಮಾಡಿದ್ದಾರೆ.
ಹೌದು..! ಬಿಎಸ್ ವೈ ಸಿಎಂ ಆಗಿದ್ದಾಗ ಯೋಗೇಶ್ವರ್ ಪದೇ ಪದೇ ದೆಹಲಿಗೆ ಭೇಟಿ ನೀಡಿ, ನಾಯಕತ್ವ ಬದಲಾವಣೆ ಬಗ್ಗೆ ಬಾಂಬ್ ಸಿಡಿಸುತ್ತಿದ್ದರು. ಇದೀಗ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬೊಮ್ಮಾಯಿ ಸಿಎಂ ಆಗಿದ್ದಾರೆ. 29 ಮಂದಿ ನೂತನ ಸಚಿವರು ಕೂಡ ಪ್ರಮಾಣವಚನ ಸ್ವೀಕರಿಸಿದ್ದು, ಖಾತೆ ಹಂಚಿಕೆಯೂ ನಡೆದಿದೆ.
ಈಗ ಸಚಿವ ಸ್ಥಾನ ಕೈ ತಪ್ಪಿದ ಬಳಿಕ ಮೊದಲ ಬಾರಿಗೆ ದೆಹಲಿಗೆ ಬಂದಿರುವ ಸಿ.ಪಿ ಯೋಗೇಶ್ವರ್, ಕರ್ನಾಟಕ ಭವನಕ್ಕೆ ತೆರಳಿದ್ದಾರೆ. ಇಂದು ಅವರು ಹೈಕಮಾಂಡ್ ನಾಯಕರ ಭೇಟಿಯಾಗುವ ಸಾಧ್ಯತೆಗಳಿವೆ. ಅಲ್ಲದೆ ಹೈಕಮಾಂಡ್ ಬಳಿ ಸಚಿವ ಸ್ಥಾನ ಕೈ ತಪ್ಪಿರುವುದಕ್ಕೆ ಅಸಮಾಧಾನ ಹೊರ ಹಾಕುವ ಸಾಧ್ಯತೆ ಕೂಡ ದಟ್ಟವಾಗಿದೆ.









