SSLC ಫಲಿತಾಂಶ ಪ್ರಕಟ – 99.9% ವಿದ್ಯಾರ್ಥಿಗಳು ಪಾಸ್
ಬೆಂಗಳೂರು: 2021ನೇ ಸಾಲಿನ ರಾಜ್ಯ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ.. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಿದ್ದಾರೆ.. ಫಲಿತಾಂಶದ ಪ್ರಕಾರ ಈ ಸಾಲಿನಲ್ಲಿ ಒಟ್ಟು 99.9 % ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಕೊರೊನಾ 2ನೇ ಅಲೆ ಹಿನ್ನೆಲೆಯಲ್ಲಿ ಕೇಂದ್ರ ಪ್ರೌಢಶಿಕ್ಷಣ ಮಂಡಳಿಯು 10ನೇ ತರಗತಿ ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದುಗೊಳಿಸಿ, ಪರ್ಯಾಯ ಮೌಲ್ಯಮಾಪನದ ಆಧಾರದಲ್ಲಿ ಫಲಿತಾಂಶ ಪ್ರಕಟಿಸಿದೆ. ಕರ್ನಾಟಕ ರಾಜ್ಯದಲ್ಲಿಯೂ ಸಹ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದುಗೊಳಿಸಿ ಪರ್ಯಾಯ ಮೌಲ್ಯಮಾಪನದ ಆಧಾರದಲ್ಲಿ ರಿಸಲ್ಟ್ ಬಿಡುಗಡೆ ಮಾಡಲಾಗಿದೆ. ಆದರೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಾತ್ರ ವಿರೋಧದ ನಡುವೆಯೇ ಶಿಕ್ಷಣ ಇಲಾಖೆ ಎರಡನೇ ದಿನ ಹೊಸ ಮಾದರಿಯಲ್ಲಿ ಪರೀಕ್ಷೆಯನ್ನು ಜುಲೈ 19, 22 ರಂದು ನಡೆಸಿತ್ತು..
ಪರೀಕ್ಷೆ ಬರೆದಿರುವ ಎಲ್ಲರನ್ನೂ ಉತ್ತೀರ್ಣಗೊಳಿಸುವುದಾಗಿ ಸರ್ಕಾರ ಈಗಾಗಲೇ ಘೋಷಣೆ ಮಾಡಿತ್ತು. ಅಂಕ ಆಧಾರಿತ ಫಲಿತಾಂಶ ಇಂದು ಪ್ರಕಟವಾಗಿದೆ. ಈ ಬಾರಿ ಒಟ್ಟು 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ರಿಜಿಸ್ಟರ್ ನಂಬರ್ ಮೂಲಕ ಫಲಿತಾಂಶ ಚೆಕ್ ಮಾಡಬಹುದಾಗಿದೆ. 3.30ರ ಸುಮಾರಿಗೆ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಅಫೀಶಿಯಲ್ ವೆಬ್‌ಸೈಟ್ sslc.karnataka.gov.in / karresults.nic.in ಗೆ ಭೇಟಿ ನೀಡಿ ಫಲಿತಾಂಶ ಚೆಕ್ ಮಾಡಬಹುದು.
SSLC ರಿಸಲ್ಟ್ ಚೆಕ್ ಮಾಡುವ ವಿಧಾನ
ಮೊದಲಿಗೆ ಕರ್ನಾಟಕ ಸೆಕೆಂಡರಿ ಎಜುಕೇಷನ್ ಎಕ್ಸಾಮಿನೇಷನ್ ಬೋರ್ಡ್ ಫಲಿತಾಂಶದ ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ಡಬೇಕು. ಬಳಿಕ ವಿದ್ಯಾರ್ಥಿಗಳು ತಮ್ಮ ಎಸ್‌ಎಸ್‌ಎಲ್‌ಸಿ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕದ ಮಾಹಿತಿ ನೀಡಿ, Submit ಎಂದು ಕ್ಲಿಕ್ ಮಾಡಿದರೆ ಫಲಿತಾಂಶ ಪುಟ ಓಪನ್ ಆಗುತ್ತದೆ. ಅದನ್ನ ಡೌನ್ ಲೋಡ್ ಮಾಡಿ ಬ್ಲ್ಯೂ ಪ್ರಿಂಟ್ ತೆಗೆದುಕೊಳ್ಳಬಹುದು. ಒಂದು ವೇಳೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶಕ್ಕೆ ಅಸಮಾಧಾನಗೊಂಡಲ್ಲಿ, ಮರು ಮೌಲ್ಯಮಾಪನಕ್ಕೆ ಹಾಕಬಹುದು. ಮರುಪರೀಕ್ಷೆ ಬರೆಯಲು ಸಹ ಅವಕಾಶ ಇರುತ್ತದೆ.








