SSLC ಫಲಿತಾಂಶ : ಪ್ರಥಮ ಭಾಷೆಯಲ್ಲಿ ಪೂರ್ಣ ಅಂಕ ಪಡೆದ 25,702 ವಿದ್ಯಾರ್ಥಿಗಳು..!
ಬೆಂಗಳೂರು: 2021ನೇ ಸಾಲಿನ ರಾಜ್ಯ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ.. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಿದ್ದಾರೆ.. ಫಲಿತಾಂಶದ ಪ್ರಕಾರ ಈ ಸಾಲಿನಲ್ಲಿ ಒಟ್ಟು 99.9 % ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಜುಲೈ 19 ಮತ್ತು 22ರಂದು ನಡೆದಿದ್ದ ಎಸ್ ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಹಾಜರಾಗಿದ್ದ 8,71,443 ವಿದ್ಯಾರ್ಥಿಗಳಲ್ಲಿ ಒಂದು ವಿದ್ಯಾರ್ಥಿ ಹೊರತುಪಡಿಸಿ ಉಳಿದೆಲ್ಲರೂ ತೇರ್ಗಡೆಯಾಗಿದ್ದಾರೆ. ಆತ ತನ್ನ ಬದಲು ಬೇರೆಯವರಿಂದ ಪರೀಕ್ಷೆ ಬರೆಸಿದ್ದ. ಹೀಗಾಗಿ ಆತನನ್ನು ಅನುತ್ತೀರ್ಣ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಕೋವಿಡ್ ಕಾರಣದಿಂದ ಈ ಬಾರಿ ವಿಶಿಷ್ಟ ರೀತಿಯಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಸಲಾಗಿತ್ತು. ಮೂರು ವಿಷಯಗಳನ್ನೊಳಗೊಂಡ ಒಂದು ಪತ್ರಿಕೆಯಂತೆ ಒಟ್ಟು ಎರಡು ದಿನ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆ ಬರೆದಿರುವ ಎಲ್ಲರನ್ನೂ ಉತ್ತೀರ್ಣಗೊಳಿಸುವುದಾಗಿ ಸರ್ಕಾರ ಘೋಷಣೆ ಮಾಡಿತ್ತು. ಅಂಕ ಆಧಾರಿತ ಫಲಿತಾಂಶ ಇಂದು ಪ್ರಕಟವಾಗಿದೆ. ಈ ಬಾರಿ ಒಟ್ಟು 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಪರೀಕ್ಷೆಯಲ್ಲಿ ಒಟ್ಟು 157 ವಿದ್ಯಾರ್ಥಿಗಳು 625ಕ್ಕೆ 625 ಅಂಕವನ್ನು ಪಡೆದಿದ್ದಾರೆ. ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 8,71,443 ವಿದ್ಯಾರ್ಥಿಗಳಲ್ಲಿ ಒಬ್ಬ ವಿದ್ಯಾರ್ಥಿ ಹೊರತುಪಡಿಸಿ ಉಳಿದೆಲ್ಲರೂ ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿಗಳು ಪ್ರಥಮ ಭಾಷೆಯಲ್ಲಿ ಶೇ 100 ಅಂಕ ಗಳಿಸಿದ್ದಾರೆ.
ಪರೀಕ್ಷೆಯಲ್ಲಿ 25,702 ವಿದ್ಯಾರ್ಥಿಗಳು ಪ್ರಥಮ ಭಾಷೆಯ ಪರೀಕ್ಷೆಯಲ್ಲಿ ಗರಿಷ್ಠ 125 ಅಂಕಗಳಿಗೆ 125 ಅಂಕಗಳನ್ನು ಗಳಿಸಿದ್ದಾರೆ. ದ್ವಿತೀಯ ಭಾಷೆಯಲ್ಲಿ 36,628, ತೃತೀಯ ಭಾಷೆಯಲ್ಲಿ 36,776, ಗಣಿತದಲ್ಲಿ 6,321, ವಿಜ್ಞಾನದಲ್ಲಿ 3,649, ಸಮಾಜ ವಿಜ್ಞಾನ ವಿಷಯದಲ್ಲಿ 9,367 ವಿದ್ಯಾರ್ಥಿಗಳು 100ಕ್ಕೆ 100 ಅಂಕಗಳನ್ನು ಪಡೆದಿದ್ದಾರೆ.
ಕೊರೊನಾ 2ನೇ ಅಲೆ ಹಿನ್ನೆಲೆಯಲ್ಲಿ ಕೇಂದ್ರ ಪ್ರೌಢಶಿಕ್ಷಣ ಮಂಡಳಿಯು 10ನೇ ತರಗತಿ ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದುಗೊಳಿಸಿ, ಪರ್ಯಾಯ ಮೌಲ್ಯಮಾಪನದ ಆಧಾರದಲ್ಲಿ ಫಲಿತಾಂಶ ಪ್ರಕಟಿಸಿದೆ. ಕರ್ನಾಟಕ ರಾಜ್ಯದಲ್ಲಿಯೂ ಸಹ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದುಗೊಳಿಸಿ ಪರ್ಯಾಯ ಮೌಲ್ಯಮಾಪನದ ಆಧಾರದಲ್ಲಿ ರಿಸಲ್ಟ್ ಬಿಡುಗಡೆ ಮಾಡಲಾಗಿದೆ. ಆದರೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಾತ್ರ ವಿರೋಧದ ನಡುವೆಯೇ ಶಿಕ್ಷಣ ಇಲಾಖೆ ಎರಡನೇ ದಿನ ಹೊಸ ಮಾದರಿಯಲ್ಲಿ ಪರೀಕ್ಷೆಯನ್ನು ಜುಲೈ 19, 22 ರಂದು ನಡೆಸಿತ್ತು..
ಪರೀಕ್ಷೆ ಬರೆದಿರುವ ಎಲ್ಲರನ್ನೂ ಉತ್ತೀರ್ಣಗೊಳಿಸುವುದಾಗಿ ಸರ್ಕಾರ ಈಗಾಗಲೇ ಘೋಷಣೆ ಮಾಡಿತ್ತು. ಅಂಕ ಆಧಾರಿತ ಫಲಿತಾಂಶ ಇಂದು ಪ್ರಕಟವಾಗಿದೆ. ಈ ಬಾರಿ ಒಟ್ಟು 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ರಿಜಿಸ್ಟರ್ ನಂಬರ್ ಮೂಲಕ ಫಲಿತಾಂಶ ಚೆಕ್ ಮಾಡಬಹುದಾಗಿದೆ. 3.30ರ ಸುಮಾರಿಗೆ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಅಫೀಶಿಯಲ್ ವೆಬ್‌ಸೈಟ್ sslc.karnataka.gov.in / karresults.nic.in ಗೆ ಭೇಟಿ ನೀಡಿ ಫಲಿತಾಂಶ ಚೆಕ್ ಮಾಡಬಹುದು.
SSLC ರಿಸಲ್ಟ್ ಚೆಕ್ ಮಾಡುವ ವಿಧಾನ
ಮೊದಲಿಗೆ ಕರ್ನಾಟಕ ಸೆಕೆಂಡರಿ ಎಜುಕೇಷನ್ ಎಕ್ಸಾಮಿನೇಷನ್ ಬೋರ್ಡ್ ಫಲಿತಾಂಶದ ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ಡಬೇಕು. ಬಳಿಕ ವಿದ್ಯಾರ್ಥಿಗಳು ತಮ್ಮ ಎಸ್‌ಎಸ್‌ಎಲ್‌ಸಿ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕದ ಮಾಹಿತಿ ನೀಡಿ, Submit ಎಂದು ಕ್ಲಿಕ್ ಮಾಡಿದರೆ ಫಲಿತಾಂಶ ಪುಟ ಓಪನ್ ಆಗುತ್ತದೆ. ಅದನ್ನ ಡೌನ್ ಲೋಡ್ ಮಾಡಿ ಬ್ಲ್ಯೂ ಪ್ರಿಂಟ್ ತೆಗೆದುಕೊಳ್ಳಬಹುದು. ಒಂದು ವೇಳೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶಕ್ಕೆ ಅಸಮಾಧಾನಗೊಂಡಲ್ಲಿ, ಮರು ಮೌಲ್ಯಮಾಪನಕ್ಕೆ ಹಾಕಬಹುದು. ಮರುಪರೀಕ್ಷೆ ಬರೆಯಲು ಸಹ ಅವಕಾಶ ಇರುತ್ತದೆ.
ಒಟ್ಟು 8,71,443 ಮಕ್ಕಳು ಪರೀಕ್ಷೆ ಬರೆದಿದ್ದು, 8,71,442 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಕಂಪ್ಯೂಟರ್ ಮೌಲ್ಯಮಾಪನ ಮಾಡಲಾಗಿದ್ದು ಎಲ್ಲೂ ಲೋಪ ಆಗಿಲ್ಲ. 4,701,50 ವಿದ್ಯಾರ್ಥಿಗಳು, 4,01,281 ವಿದ್ಯಾರ್ಥಿನಿಯರು ಪಾಸ್ ಆಗಿದ್ದಾರೆ ಎಂದು ತಿಳಿಸಿದರು.
‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ , ಹೈಟೆನ್ಷನ್ ವೈರ್ ತಗುಲಿ ಫೈಟರ್ ಸಾವು
ಪಿಎಂ ಕಿಸಾನ್ ಯೋಜನೆ , ರೈತರ ಖಾತೆಗಳಿಗೆ 19,500 ಕೋಟಿ ರೂ. ವರ್ಗಾವಣೆ: ಮೋದಿ








