12 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ vaccine-for-children
ಬೆಂಗಳೂರು : ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪ್ರಭಾವ ಬೀರಲಿದೆ ಎಂದು ತಜ್ಞರು ಎಚ್ಚರಿಕೆ ಕೊಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ 12 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಈ ವಾರ ಸಮ್ಮತಿಸುವ ಸಾಧ್ಯತೆ ಇದೆ.
ಇನ್ನೊಂದು ವಾರದಲ್ಲಿ ಜೈಡಸ್ ಕ್ಯಾಡಿಲಾ ಕಂಪನಿಯ ಕೊರೊನಾ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮತಿ ನೀಡುವ ಸಾಧ್ಯತೆ ಇದೆ.
ಜೈಡಸ್ ಕ್ಯಾಡಿಲಾ ಕಂಪನಿಯು ಜೈಕೋವ್ ಡಿ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡುವಂತೆ ಕೋರಿ ಜುಲೈ 1 ರಂದು ಅರ್ಜಿ ಸಲ್ಲಿಸಲಾಗಿದೆ.
ಇಂಜೆಕ್ಷನ್ ಬಳಕೆ ಮಾಡದೆ ಚರ್ಮದ ಮೂಲಕ ದೇಹದ ಒಳಗೆ ಲಸಿಕೆ ಸೇರಿಸುವುದು ಈ ಲಸಿಕೆಯ ವಿಶೇಷತೆಯಾಗಿದೆ.
ಈ ಹಿನ್ನೆಲೆಯಲ್ಲಿ 12 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಅನುಮತಿ ನೀಡುವ ಸಾಧ್ಯತೆಗಳಿವೆ.