ಬಿಜೆಪಿ ಸರ್ಕಾರ ಹೆಚ್ಚು ದಿನ ಉಳಿಯುವುದು ಅನುಮಾನ : ಸಿದ್ದರಾಮಯ್ಯ
ಮಂಡ್ಯ :ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಹೆಚ್ಚು ದಿನ ಉಳಿಯುವುದು ಅನುಮಾನ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಖಾತೆ ಹಂಚಿಕೆ ನಂತರ ಸಚಿವರು ಕೈ ಕೈ ಇಸುಕಿಕೊಳ್ಳುತ್ತಿದ್ದು, ಆನಂದ್ ಸಿಂಗ್ ರಾಜೀನಾಮೆ ನೀಡಲಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿವೆ.
ಈ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಂಡ್ಯದಲ್ಲಿ ಸಿದ್ದರಾಮಯ್ಯ ಮಾತನಾಡಿ, ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟಾಂಪ್ ನೇತೃತ್ವದ ಸರ್ಕಾರದ ಬಗ್ಗೆ ಇನ್ನು ಮೂರು ತಿಂಗಳು ಮಾತನಾಡುವುದಿಲ್ಲ.
ಬೊಮ್ಮಾಯಿ ಸರ್ಕಾರ ಎಷ್ಟು ದಿನ ಇರುತ್ತದೆ ಎಂದು ನಾನೇನು ಜ್ಯೋತಿಷ್ಯ ಹೇಳುವುದಿಲ್ಲ. ಅವರಾಗಿಯೇ ಸರ್ಕಾರ ಬೀಳಿಸಲಿದ್ದಾರೆ. ಬಿಜೆಪಿ ಸರ್ಕಾರ ಪೂರ್ಣಾವಧಿ ಇರುವುದು ಅನುಮಾನ ಎಂದು ಹೇಳಿದರು.










