ಈ ಜನ್ಮದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ : ಕೆ.ಎಸ್.ಈಶ್ವರಪ್ಪ
ಬೆಳಗಾವಿ : ಆಡಳಿತ ಮಾಡಿದ್ದರೆ ಮತ್ತೆ ಅಧಿಕಾರಕ್ಕೆ ಅವರೇ ಬರುತ್ತಿದ್ದರು. ಈಗ ಚುನಾವಣೆಗೆ ಎರಡು ವರ್ಷ ಮೊದಲೇ ನಾನೇ ಮುಂದಿನ ಸಿಎಂ ಎನ್ನುವ ಭ್ರಮೆಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಆದ್ರೆ ಈ ಜನ್ಮದಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಬೊಮ್ಮಾಯಿ ಸರ್ಕಾರ ಹೆಚ್ಚು ಕಾಲ ಇರಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು.
ಆಡಳಿತ ಮಾಡಿದ್ದರೆ ಮತ್ತೆ ಅಧಿಕಾರಕ್ಕೆ ಅವರೇ ಬರುತ್ತಿದ್ದರು. ಈಗ ಚುನಾವಣೆಗೆ ಎರಡು ವರ್ಷ ಮೊದಲೇ ನಾನೇ ಮುಂದಿನ ಸಿಎಂ ಎನ್ನುವ ಭ್ರಮೆಯಲ್ಲಿ ಸಿದ್ದರಾಮಯ್ಯ ಇದ್ದಾರೆ. ರಾಜ್ಯದ ಮುಖ್ಯಮಂತ್ರಿ ಆಗುತ್ತೇನೆ ಎಂಬ ಬಗ್ಗೆ ಸಿದ್ದರಾಮಯ್ಯಗೆ ನಿತ್ಯ ಕೆಟ್ಟ ಕೆಟ್ಟ ಕನಸು ಬೀಳುತ್ತಿವೆ. ಆ ಕೆಟ್ಟ ಕನಸು ನನಸು ಆಗಲು ಸಾಧ್ಯವೇ ಇಲ್ಲ ಎಂದು ಕಿಡಿಕಾರಿದರು.
ಅಲ್ಲದೆ ಸಿದ್ದರಾಮಯ್ಯ ಅಷ್ಟೇ ಅಲ್ಲ ಡಿಕೆಶಿ, ಪರಮೇಶ್ವರ್, ಎಂ.ಬಿ.ಪಾಟೀಲ್ ಸೇರಿ ಎಲ್ಲರೂ ಅದನ್ನೆ ಹೇಳಿದ್ದಾರೆ. ಇವರ ಕೆಟ್ಟ ಕನಸು ಎಂದು ನನಸು ಆಗೋಕೆ ಸಾಧ್ಯವೇ ಇಲ್ಲ ಎಂದಿದ್ದಾರೆ. ಈ ಜನ್ಮದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ಅಭಿಪ್ರಾಯಪಟ್ಟರು.









