ಬೆಂಗ್ಳೂರಲ್ಲಿ ಕೊರೊನಾ ಹೊಸ ತಳಿ ಪತ್ತೆ..! Corona
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಕೊರೊನಾ ಮೂರನೇ ಅಲೆ ಈಗಾಗಲೇ ನಗರಕ್ಕೆ ಎಂಟ್ರಿ ಕೊಟ್ಟಿರುವ ಎಲ್ಲಾ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ.
ಈ ಮಧ್ಯೆ ಸಿಲಿಕಾನ್ ಮಂದಿಗೆ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದ್ದು, ನಗರದಲ್ಲಿ ಕೊರೊನಾ ಹೊಸ ತಳಿ ಪತ್ತೆಯಾಗಿದೆ ಎಂದು ವರದಿಯಾಗಿದೆ.
ನಗರದಲ್ಲಿ 8 ಜನರಲ್ಲಿ ಕಪ್ಪಾ ತಳಿ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. 192 ಜನರ ಗಂಟಲು ದ್ರವವನ್ನು ಜಿನೋಮಿಕ್ ಸೀಕ್ವೆನ್ಸ್ ಟೆಸ್ಟ್ ಗೆ ರವಾನಿಸಲಾಗಿತ್ತು.
ಇದೀಗ ವರದಿ ಬಂದಿದ್ದು, 148 ಜನರಲ್ಲಿ ಡೆಲ್ಟಾ ತಳಿ ಸೋಂಕು ಪತ್ತೆಯಾಗಿದ್ದರೆ, 8 ಜನರಲ್ಲಿ ಕಪ್ಪಾ ತಳಿಯ ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಇದರೊಂದಿಗೆ ನಗರಕ್ಕೆ ಹೊಸ ತಳಿ ಎಂಟ್ರಿಕೊಟ್ಟಿದ್ದು, ಮೆಟ್ರೊ ಮಂದಿಯ ಎದೆಬಡಿತಕ್ಕೆ ಕಾರಣವಾಗಿದೆ.









