ಗಣಿಗಾರಿಕೆಗೆ ವಿಚಾರ | ನಾನು ಭಯ ಪಟ್ಟು ಹಿಂದೆ ಸರಿಯಲ್ಲ ಎಂದ ಸುಮಲತಾ sumalatha saaksha tv
ಮಂಡ್ಯ : ಅಕ್ರಮ ನಡೆಯುತ್ತಿದೆ ಎಂದು ಧ್ವನಿ ಎತ್ತಿದಾಗ ಹಲವು ಕಡೆಯಿಂದ ವಿರೋಧ ವ್ಯಕ್ತವಾಗಿತ್ತು. ವಿರೋಧ ಮಾಡಿದ್ರು ಅಂತ ನಾನು ಭಯ ಪಟ್ಟು ಹಿಂದೆ ಸರಿಯಲ್ಲಿಲ್ಲ ಎಂದು ಸಂಸದೆ ಸುಮಲತಾ ಹೇಳಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಕ್ರಮ ಗಣಿಗಾರಿಕೆಗೆ ನನ್ನ ವಿರೋಧ ಇಲ್ಲ. ಆದ್ರೆ, ಕೆಆರ್‍ಎಸ್ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗೆ ಅವಕಾಶ ಮಾಡಿಕೊಡಬೇಕಾ ಎಂದು ಪ್ರಶ್ನಿಸಿದರು.
ಇನ್ನು ಗಣಿಗಾರಿಕೆ ವಿಚಾರ ಇತ್ತೀಚಿನ ದಿನಗಳಲ್ಲಿ ಟ್ರ್ಯಾಕ್ ಗೆ ಬಂದಿದೆ. ಎರಡು ವರ್ಷದಿಂದ ಈ ಬಗ್ಗೆ ಹೋರಾಟ ಮಾಡಿಕೊಂಡು ಬಂದಿದ್ದೇನೆ.
ಮೊನ್ನೆ ಅಧಿವೇಶನದಲ್ಲಿ ಸಹ ಚರ್ಚೆ ಮಾಡಿದ್ದೇನೆ. ಕೇಂದ್ರ ಸಚಿವರ ಗಮನಕ್ಕೆ ತಂದಿದ್ದೇನೆ ಎಂಬುದಾಗಿ ತಿಳಿಸಿದರು.
ಇನ್ನು ಸಕ್ರಮ ಮಾಡಬೇಕು ಎಂದು ಹೇಳುತ್ತಿರುವವರು ಮೊದಲು ಅಕ್ರಮ ನಡೆಯುತ್ತಿದೆ ಎಂದು ಒಪ್ಪಿಕೊಳ್ಳಬೇಕು ಎಂದು ಒತ್ತಾಯಿಸಿದ ಸುಮಲತಾ,
ಈಗ ಅಕ್ರಮ ಮಾಡಿದ್ದೇವೆ, ಸಕ್ರಮ ಮಾಡಿಕೊಡಿ ಎಂದು ಹೇಳಿದ್ರೆ ಅದಕ್ಕೆ ಒಂದು ಪ್ರಕ್ರಿಯೆ ಇರುತ್ತದೆ ಎಂದು ತಿರುಗೇಟು ನೀಡಿದರು.









