ತಮ್ಮ ದೆಹಲಿ ಪ್ರಯಾಣದ ಸುದ್ದಿಗೆ ಸ್ಪಷ್ಟನೆ ಕೊಟ್ಟ ಆನಂದ್ ಸಿಂಗ್..!
ವಿಜಯನಗರ : ಖಾತೆ ಹಂಚಿಕೆ ವಿಚಾರವಾಗಿ ಅಸಮಾದಾನಗೊಂಡಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಸದ್ಯ ದೆಹಲಿ ಪ್ರವಾಸ ಕೈಗೊಂಡಿರುವುದು, ಹೈಕಮಾಂಡ್ ಮನವೊಲಿಸಿ ಖಾತೆ ಬದಲಾಯಿಸಿಕೊಳ್ಳಲು ಎನ್ನುವ ವದಂತಿಗಳು ಹರಿದಾಡ್ತಿದೆ.. ಇದಕ್ಕೆ ಸ್ಪಷ್ಟನೆ ನೀಡಿರುವ ಆನಂದ್ ಸಿಂಗ್ ನಾನು ಖಾತೆ ಬದಲಾವಣೆಗೆ ದೆಹಲಿಗೆ ಹೋಗುತ್ತೇನೆ ಎಂದು ಎಲ್ಲೂ ಹೇಳಿಲ್ಲ. ದೆಹಲಿಗೆ ಹೋಗುವುದೂ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ..
ವಿಜಯನಗರದಲ್ಲಿ ಮಾತನಾಡಿರುವ ಅವರು ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಆರ್. ಅಶೋಕ್ ಬಳಿ ಮಾತನಾಡಿದಾಗಲೂ ದೆಹಲಿಗೆ ಹೋಗುತ್ತೇನೆ ಎಂದು ಹೇಳಿಲ್ಲ. ಬಿ.ಎಸ್. ಯಡಿಯೂರಪ್ಪನವರು ಹಿರಿಯರಾಗಿರುವುದರಿಂದ ಅವರ ಆಶೀರ್ವಾದ ಪಡೆಯಲು ಹೋಗಿದ್ದೆ. ಖಾತೆ ಸಂಬಂಧ ಅವರ ಬಳಿ ಏನು ಮಾತನಾಡಿಲ್ಲ. ಯಾವುದೇ ರೀತಿಯ ದುಡುಕಿದ ನಿರ್ಧಾರ ತೆಗೆದುಕೊಳ್ಳಬೇಡಿ. ಸಿ.ಎಂ. ಜತೆ ಚರ್ಚಿಸಿ ಬಗೆಹರಿಸಿಕೊಳ್ಳಿ ಎಂದು ಸಲಹೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ನೈಟ್ ಕರ್ಫ್ಯೂ ಸಮಯ, ವೀಕೆಂಡ್ ಕರ್ಫ್ಯೂ ಬಗ್ಗೆ ಆಗಸ್ಟ್ 15ರ ನಂತರ ತುರ್ತು ಸಭೆಯಲ್ಲಿ ನಿರ್ಧಾರ – ಆರ್ ಅಶೋಕ್
ಅಲ್ಲದೇ ನಾನು ಪಕ್ಷದಲ್ಲಿಯೆ ಇರುತ್ತೇನೆ. ಹಿರಿಯರ ಮಾತಿಗೆ ಗೌರವ ಕೊಡುತ್ತೆನೆ. ಧ್ವಜಾರೋಹಣ ನಂತರ ಪುನಃ ನಾನು ಬೆಂಗಳೂರಿಗೆ ಹೋಗುತ್ತೇನೆ ಎಂದಿದ್ದಾರೆ. ಇದೇ ವೇಳೆ ಹೊಸದಾಗಿ ಅಸ್ತಿತ್ವಕ್ಕೆ ಬಂದ ವಿಜಯನಗರ ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡುವ ಜವಾಬ್ದಾರಿ ನನಗೆ ವಹಿಸಿದ್ದಾರೆ. ಬಳ್ಳಾರಿಯಲ್ಲಿ ಜಿಲ್ಲಾಧಿಕಾರಿ ಧ್ವಜಾರೋಹಣ ಮಾಡುತ್ತಾರೆ. ಜಿಲ್ಲೆ ರಚನೆ ಬಳಿಕ ನಡೆಯುತ್ತಿರುವ ಮೊದಲ ಸ್ವಾತಂತ್ರ್ಯ ದಿನಾಚರಣೆ ಇದು. ಈ ಸುವರ್ಣ ಗಳಿಗೆಯಲ್ಲಿ ನನಗೆ ಧ್ವಜಾರೋಹಣಕ್ಕೆ ಅವಕಾಶ ಸಿಕ್ಕಿರುವುದು ನನ್ನ ಪುಣ್ಯ. ವಿಜಯನಗರ ಕ್ಷೇತ್ರದ ಜನರ ಋಣ ತೀರಿಸಲು ನನಗೆ ಆಗುವುದಿಲ್ಲ ಎಂದು ಹೇಳುಹ ಜೊತೆಗೆ ದೆಹಲಿ ಪ್ರವಾಸದ ಊಹಾಪೋಹಗಳಿಗೆ ತೆರೆಎಳೆದಿದ್ದಾರೆ.








