75ನೇ ಸ್ವಾತಂತ್ರ್ಯ ದಿನ : ಮಾಣಿಕ್ ಷಾ ಮೈದಾನದಲ್ಲಿ ಬೊಮ್ಮಾಯಿ ಧ್ವಜಾರೋಹಣ
ಬೆಂಗಳೂರು : ದೇಶದಾದ್ಯಂತ ಇಂದು 75ನೇ ವರ್ಷದ ಸ್ವಾತಂತ್ರ್ಯದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಗುತ್ತಿದೆ.
ಅತ್ತ ದೆಹಲಿಯ ಕೆಂಪು ಕೋಟೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದರೇ ಇತ್ತ ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ತಿರಂಗಾ ಹಾರಿಸಿದ್ದಾರೆ.
ಬೆಳಿಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.
ಬಳಿಕ ತೆರೆದ ವಾಹನದಲ್ಲಿ ಪೊಲೀಸ್ ಗೌರವ ಸ್ವೀಕರಿಸಿದರು. ನಂತರ ಭಾಷಣದಲ್ಲಿ ರಾಜ್ಯದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭ ಕೋರಿದರು.









