ಭಾರತ – ಇಂಗ್ಲೆಂಡ್ 2ನೇ ಟೆಸ್ಟ್- ಕ್ರಿಕೆಟ್ ಕಾಶಿಯಲ್ಲಿ ಐತಿಹಾಸಿಕ ಜಯ ಸಾಧಿಸಿದ ಭಾರತ
ಲಂಡನ್ನ ಲಾರ್ಡ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 2ನೇ ಟೆಸ್ಟ್ನ ದ್ವಿತೀಯ ಇನ್ನಿಂಗ್ಸ್ ನಲ್ಲಿ ಭಾರತ ಐತಿಹಾಸಿಕ ಗೆಲುವನ್ನು ದಾಖಲಿಸಿದೆ.
ಭಾರತ ಇಂಗ್ಲೆಂಡ್ ವಿರುದ್ಧ 151 ರನ್ಗಳ ಜಯ ಸಾಧಿಸಿದೆ
ಮೊಹಮ್ಮದ್ ಸಿರಾಜ್ ಅವರು 4 ವಿಕೆಟ್ ಕಬಳಿಸಿ ಭಾರತದ ಗೆಲುವಿಗೆ ಮಹತ್ವದ ಪಾತ್ರವನ್ನು ವಹಿಸಿದರೆ ಬುಮ್ರಾ ಅವರು ಅದ್ಭುತ ಬೌಲಿಂಗ್ ಪ್ರದರ್ಶಿಸಿ 3 ವಿಕೆಟ್ ಗಳಿಸಿದರು.

ಭಾರತ ಮೊದಲ ಇನ್ನಿಂಗ್ಸ್ನಲ್ಲಿ 126.1 ಓವರ್ 364 ರನ್ ಗಳಿಸಿತ್ತು. ಇದರ ಬೆನ್ನಟ್ಟಿದ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ನಲ್ಲಿ 128 ಓವರ್ಗಳಲ್ಲಿ 391 ರನ್ ಗಳಿಸಿ 27 ರನ್ ಮುನ್ನಡೆ ಪಡೆದುಕೊಂಡಿತ್ತು. ದ್ವಿತೀಯ ಇನ್ನಿಂಗ್ಸ್ ನಲ್ಲಿ ಭಾರತ 298 ರನ್ ಗೆ ಡಿಕ್ಲೇರ್ ಮಾಡಿ 271 ರನ್ ಗಳ ಗುರಿಯನ್ನು ಇಂಗ್ಲೆಂಡ್ ಗೆ ನೀಡಿತ್ತು. ಇದನ್ನು ಬೆನ್ನಟ್ಟಿದ ಇಂಗ್ಲೆಂಡ್ 120 ಕ್ಕೆ ಸರ್ವ ಪತನ ಕಂಡಿತು.
ಈ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಅಂತರದ ಮಹತ್ವದ ಮುನ್ನಡೆ ಕಾಯ್ದುಕೊಂಡಿದೆ. ಮೊದಲ ಟೆಸ್ಟ್ ಪಂದ್ಯವು ಡ್ರಾದಲ್ಲಿ ಅಂತ್ಯಗೊಂಡಿದೆ.
#India #secondTest #England








