ಅಫ್ಘಾನ್ ಬಿಕ್ಕಟ್ಟು : ಭಾರತದಿಂದ ಇ-ವೀಸಾ, ಹೆಲ್ಪ್ ಲೈನ್
ನವದೆಹಲಿ : ಅಫ್ಘಾನ್ ನಲ್ಲಿ ತಾಲಿವಾನಿಗಳ ಅಟ್ಟಹಾಸ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಜನರು ಬೇರೆ ದೇಶಗಳತ್ತ ಮುಖ ಮಾಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಅಘ್ಫಾನಿಸ್ತಾನ ತೊರೆದು ಭಾರತಕ್ಕೆ ಮರಳುವ ಅಫ್ಘನ್ನರ ಅರ್ಜಿಗಳನ್ನು ತ್ವರಿತಗತಿಯಲ್ಲಿ ಸ್ವೀಕರಿಸಲು ಕೇಂದ್ರ ಸರ್ಕಾರ ಹೊಸ ವರ್ಗದ ಎಲೆಕ್ಟ್ರಾನಿಕ್ ವೀಸಾ ಪರಿಚಯಿಸುವುದಾಗಿ ತಿಳಿಸಿದೆ.
‘ಅಫ್ಗಾನಿಸ್ತಾನದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವಿದೇಶಾಂಗ ಇಲಾಖೆಯು ವೀಸಾ ನಿಬಂಧನೆಗಳನ್ನು ಪರಿಶೀಲಿಸುತ್ತಿದೆ.
ಭಾರತಕ್ಕೆ ಪ್ರವೇಶಿಸಲು ಅಗತ್ಯವಾದ ವೀಸಾಕ್ಕೆ ಸಂಬಂಧಿಸಿದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ‘ಇ-ಎಮರ್ಜೆನ್ಸಿ ಎಕ್ಸ್-ಮಿಸ್ಕ್ ವೀಸಾ’ ಎಂಬ ಹೊಸ ಮಾದರಿಯ ಎಲೆಕ್ಟ್ರಾನಿಕ್ ವೀಸಾವನ್ನು ಪರಿಚಯಿಸಲಾಗುತ್ತಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.
ಇತ್ತ 20 ವರ್ಷಗಳ ಬಳಿಕ ಅಫ್ಘಾನ್ ನಲ್ಲಿ ತಾಲಿಬಾನ್ ಅಧಿಪತ್ಯ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಾಣಭಯದಿಂದ ಅಲ್ಲಿನ ಜನರು ಬೇರೆ ದೇಶಗಳಿಗೆ ತೆರಳು ಮುಂದಾಗುತ್ತಿದ್ದಾರೆ.









