ಕೃಷಿ ಕಾಯ್ದೆ ವಿರೋಧಿಸುವವರು ರೈತರಲ್ಲ : ಶೋಭಾ ಕರಂದ್ಲಾಜೆ Shobha Karandlaje saaksha tv
ಮೈಸೂರು : ಕೃಷಿ ಕಾಯ್ದೆ ವಿರೋಧಿಸಿ ಹೋರಾಟ ನಡೆಸುತ್ತಿರುವವರು ರೈತರಲ್ಲ ಎಂದು ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವವರು ರೈತರಲ್ಲ.
ಈ ಹೋರಾಟ ರೈತರ ಹೋರಾಟವಾಗಿ ಉಳಿದಿಲ್ಲ. ಅದು ದಲ್ಲಾಳಿಗಳ ಹೋರಾಟವಾಗಿದೆ ಎಂದು ಅಭಿಪ್ರಾಯಪಟ್ಟರು.
ಅಲ್ಲದೆ ರೈತರನ್ನು ಮನವೊಲಿಸಬಹುದು, ಆದರೆ ರೈತರಂತೆ ನಟಿಸುವವರನ್ನು ಮನವೊಲಿಸಲು ಸಾಧ್ಯವಿಲ್ಲ ಎಂದ ಶೋಭಾ ಕರಂದ್ಲಾಜೆ, ನೂತನ ಕಾಯ್ದೆಯಿಂದ ರೈತರಿಗೆ ಒಳ್ಳೆಯದಾಗಲಿದೆ.
ರೈತರು ಎಪಿಎಂಸಿ ಹೊರತಾಗಿ ತಮ್ಮ ಹೊಲದಲ್ಲಿ ತಮ್ಮ ಬೆಳೆಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಬಹುದು ಎಂದು ತಿಳಿಸಿದರು.
ಇನ್ನು ಅಫ್ಘಾನಿಸ್ತಾನ್ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು, ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಖಂಡನೀಯ.
ಈ ವಿಚಾರದಲ್ಲಿ ಎಲ್ಲಾ ದೇಶಗಳು ಒಟ್ಟಾಗಿ ದನಿ ಎತ್ತಿ ವಿಶ್ವಸಂಸ್ಥೆ ಮೇಲೆ ಒತ್ತಡ ಹೇರಬೇಕಾಗಿದೆ ಎಂದರು.









