ನಾಳೆಯಿಂದ ಕೊರೊನಾ ಮಾರ್ಗಸೂಚಿ ಅನುಸರಿಸಿ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಪಿಯು ಬೋರ್ಡ್ ಸಿದ್ಧತೆ ನಡೆಸಿದೆ. ಪರೀಕ್ಷೆ ವೇಳೆ ಕೊರೊನಾ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿದೆ. ಈ ಬಾರಿ 18 ಸಾವಿರದ 414 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು ಇದರಲ್ಲಿ 17469 ಖಾಸಗಿ ವಿದ್ಯಾರ್ಥಿಗಳು, 352 ರಿಪೀಟರ್ಸ್ ಮತ್ತು 5093 ಪ್ರೆಶರ್ಸ್ ವಿದ್ಯಾರ್ಥಿಗಳು ಸೇರಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಯು 19 ಆಗಸ್ಟ್ ನಿಂದ ಸೆಪ್ಟೆಂಬರ್ 3 ರವರೆಗೆ ಜರುಗಲಿದೆ. ರಾಜ್ಯದ 187 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸಲಾಗಿದ್ದು, ಕೋವಿಡ್ ಸೋಂಕು ಇದ್ರೆ ಕೂಡಲೇ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಲು ತಿಳಿಸಲಾಗಿದೆ.
ಕೋವಿಡ್ ಸೋಂಕಿತರಿಗೂ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದು, ಹೊರ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳಿಗೆ RTPC ನೆಗೇಟಿವ್ ರಿಪೋರ್ಟ್ ಕಡ್ಡಾಯವಾಗಿದೆ.
ಕೇರಳ ಗಡಿ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿಗಳಿಗೆ ಕೂಡ RTPC ಟೆಸ್ಟ್ ಕಡ್ಡಾಯವಾಗಿದೆ.ಪರೀಕ್ಷಾ ಕೊಠಡಿಯಲ್ಲಿ ಡೆಸ್ಕ್ ಒಂದರಲ್ಲಿ ಒಬ್ಬರಂತೆ ಹತ್ತು ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಲಾಗಿದೆ.
ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆಯಿದ್ದು, ಯಾವುದೇ ಆತಂಕವಿಲ್ಲದೇ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ.
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
ವೆಜ್ ಪನೀರ್ ಫ್ರೈಡ್ ರೈಸ್ https://t.co/bpvIFfVtRu
— Saaksha TV (@SaakshaTv) August 16, 2021
ಬೇಸಿಗೆಯಲ್ಲಿ ಈರುಳ್ಳಿಯನ್ನು ಏಕೆ ಹೆಚ್ಚು ಬಳಸಬೇಕು?#Saakshatv #healthtips #summer #onion https://t.co/lB7oABRZJx
— Saaksha TV (@SaakshaTv) August 16, 2021
75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ – ಎಸ್‌ಬಿಐನಿಂದ ಗೃಹ ಸಾಲದ ಮೇಲೆ ಶೂನ್ಯ ಸಂಸ್ಕರಣಾ ಶುಲ್ಕ#StateBank #Homeloans https://t.co/W0TBsvT9cV
— Saaksha TV (@SaakshaTv) August 15, 2021
ನಿಂಬೆಯ ಅತಿಯಾದ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು#Saakshatv #healthtips #lemon https://t.co/5YGdDNcKq3
— Saaksha TV (@SaakshaTv) August 15, 2021
#secondary #PUC #Coronaprotocol