ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 36,401 ಹೊಸ ಪ್ರಕರಣಗಳು ದಾಖಲಾಗಿವೆ.
ಒಟ್ಟು ಸೋಂಕಿತರ ಸಂಖ್ಯೆ 3,23,22,258 ಕೋಟಿಗೆ ಏರಿಕೆಯಾಗಿದೆ. ಇನ್ನು 530 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಈವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ 4,32,079 ಮಂದಿ ಮೃತಪಟ್ಟಿದ್ದಾರೆ.
ಸೋಂಕಿಗೆ ಬಲಿಯಾದವರ ಸಂಖ್ಯೆ 4.33 ಲಕ್ಷದ ಗಡಿ ದಾಟಿದೆ.
ನಿನ್ನೆ ಒಂದೇ ದಿನ ದೇಶದ್ಯಾಂತ 18 ಲಕ್ಷಕ್ಕೂ ಹೆಚ್ಚು ಮಂದಿಯ ಕೊರೊನಾ ತಪಾಸಣೆ ನಡೆಸಲಾಗಿದೆ.
ದೇಶದಲ್ಲಿ ಇದುವರೆಗೂ 50 ಕೋಟಿಗೂ ಹೆಚ್ಚು ಮಂದಿಯ ತಪಾಸಣೆ ನಡೆಸಲಾಗಿದೆ.








