ಐಎಎಸ್ ಅಧಿಕಾರಿಗಳ ಫ್ಯಾನ್ಸ್ ಪೇಜ್ ನಿಷೇಧಕ್ಕೆ ಪ್ರತಾಪ್ ಸಿಂಹ ಆಗ್ರಹ Pratap simha saaksha tv
ಮೈಸೂರು : ಐಎಎಸ್ ಅಧಿಕಾರಿಗಳ ಫ್ಯಾನ್ಸ್ ಪೇಜ್ ನಿಷೇಧಿಸುವಂತೆ ಆಗ್ರಹಿಸಿ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಂಸದ ಪ್ರತಾಪ ಸಿಂಹ ಪರೋಕ್ಷವಾಗಿ ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ನಡೆದ ಕೈಗಾರಿಕೋದ್ಯಮಿಗಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಐಎಎಸ್, ಐಪಿಎಸ್ ಅಧಿಕಾರಿಗಳು ಏನೂ ಕೆಲಸ ಮಾಡದಿದ್ದರೂ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಬಿಂಬಿಸಿಕೊಳ್ಳುತ್ತಿದ್ದಾರೆ.
ಇದಕ್ಕೆ ಕಡಿವಾಣ ಹಾಕಬೇಕು ಎಂದು ಅಭಿಪ್ರಾಯಪಟ್ಟರು. ಅಲ್ಲದೆ ಐಎಎಸ್ ಅಧಿಕಾರಿಗಳ ಫ್ಯಾನ್ಸ್ ಪೇಜ್ ನಿಷೇಧಿಸುವಂತೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ ಅವರಿಗೆ ಮನವಿ ಮಾಡಿದ್ದಾರೆ.
ಅಧಿಕಾರಿಗಳು ಮಾಡಿದ ಕೆಲಸಗಳನ್ನ ಜಿಲ್ಲೆಯಿಂದ ಒಂದು ಅಕೌಂಟ್ ತೆರೆದು ಅದರಲ್ಲಿ ಮಾಹಿತಿ ಹಾಕಲಿ. ಫ್ಯಾನ್ಸ್ ಫೇಜ್ ಗಳಿಂದ ಹೊಗಳಿಕೆಗಳು ಸೃಷ್ಟಿಯಾಗಿವೆ.
ಯಾರೋ ಒಬ್ಬ ಲಾಠಿ ಹಿಡಿದು ಓಡಾಡಿದರೆ ಹಾಗೇ, ಹೀಗೆ ಅಂತ ಬಿಂಬಿಸಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಪ್ರತಾಪ್ ಸಿಂಹ ಪುನರುಚ್ಚರಿಸಿದರು.