ಗುಂಡಿನ ಚಕಮಕಿ : ಉಗ್ರರನ್ನು ಹೊಡೆದುರುಳಿಸಿದ ಸೇನೆ
ಶ್ರೀನಗರ : ಜಮ್ಮು ಕಾಶ್ಮೀರದ ಅವಂತಿಪೂರದ ನಾಗಬೀರನ್ ಟ್ರಾಲ್ ಅರಣ್ಯ ಪ್ರದೇಶದ ಮೇಲ್ಭಾಗದಲ್ಲಿ ನಡೆದ ಉಗ್ರರು ಹಾಗೂ ಸೈನಿಕರ ನಡುವಿನ ಗುಂಡಿನ ಚಕಮಕಿಯಲ್ಲಿ ಮೂವರು ಜೈಷ್-ಇ-ಮೊಹಮ್ಮದ್ ಸಂಘಟನೆಯ ಉಗ್ರರನ್ನು ಭಾರತೀಯ ಸೇನೆ ಯೋಧರು ಹೊಡೆದುರುಳಿಸಿದ್ದಾರೆ.
ಶನಿವಾರ ಬೆಳಗಿನ ಜಾವ ಈ ಗುಂಡಿನ ಚಕಮಕಿ ಆರಂಭವಾಗಿದ್ದು, ಈಗಲೂ ಕಾರ್ಯಚರಣೆ ಮುಂದುವರೆದಿದೆ. ಸೇನೆ ಹಾಗೂ ಪೊಲೀಸರ ಜಂಟಿ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಸದ್ಯ ಮೂವರು ಉಗ್ರರನ್ನು ಸದೆಬಡಿಯಲಾಗಿದೆ. ಇನ್ನೂ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.









