ಮಂಗಳೂರು : ರೈಲು ಡಿಕ್ಕಿ ಹೊಡೆದು ಇಬ್ಬರು ಸಾವು Mangalore saaksha tv
ಮಂಗಳೂರು : ರೈಲು ಡಿಕ್ಕಿ ಹೊಡೆದು ಮಹಿಳೆಯರಿಬ್ಬರು ಮೃತಪಟ್ಟಿರುವ ಘಟನೆ ಮಂಗಳೂರಿನ ಮಹಾಕಾಳಿ ಪಡ್ಪು ಬಳಿ ನಡೆದಿದೆ.
ರೈಲು ಹಳಿ ದಾಟುವಾಗ ಈ ದುರ್ಘಟನೆ ಸಂಭಸಿದ್ದು, ಮೃತರ ಗುರುತು ಪತ್ತೆಯಾಗಿಲ್ಲ.
ಆದ್ರೆ ಇವರು ಬೀಡಿ ಬ್ರಾಂಚ್ ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಇಂದು ಬೆಳಿಗ್ಗೆ ಕೆಲಸಕ್ಕೆ ತೆರಳಲು ಹಳಿ ದಾಟುವಾಗ ಈ ದುರ್ಘಟನೆ ಸಂಭವಿಸಿದೆ.
ಸದ್ಯ ಘಟನಾಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಈ ಸಂಬಂಧ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.