ವೀಕೆಂಡ್ ಕರ್ಫ್ಯೂ ವಿರೋಧಿಸಿ ಮೈಸೂರಲ್ಲಿ ಪ್ರತಿಭಟನೆ Mysore saaksha tv
ಮೈಸೂರು : ಜಿಲ್ಲೆಯಲ್ಲಿ ಕೊರೊನಾ ಸೋಂಕು ವೈರಸ್ ಗೆ ಕಡಿವಾಣ ಹಾಕಲು ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ಆದ್ರೆ ಇದಕ್ಕೆ ವಿವಿಧ ಸಂಘ, ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ.
ನಗರದ ದೇವರಾಜ ಅರಸು ರಸ್ತೆಯಲ್ಲಿ ಜಮಾಯಿಸಿರುವ ಪ್ರತಿಭಟನಾಕಾರರು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾರೆ.
ಅರಸು ರಸ್ತೆಯ ಮಳಿಗೆಗಳ ಮುಂಭಾಗದಲ್ಲಿ ಕಪ್ಪು ಬಟ್ಟೆ ಹಾಗೂ ಕಪ್ಪು ಪಟ್ಟಿಯನ್ನ ಧರಿಸಿ ಜನರು ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ.
ರಾಜ್ಯ ಸರ್ಕಾರ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂ ಅನಗತ್ಯ ಹಾಗೂ ಅವೈಜ್ಞಾನಿಕವಾದದ್ದು, ಹೀಗಾಗಿ ಯಾವುದೇ ಕಾರಣಕ್ಕೂ ವೀಕೆಂಡ್ ಕರ್ಫ್ಯೂ ಮುಂದುವರಿಸಬಾರದು.
ಶನಿವಾರ ಹಾಗೂ ಭಾನುವಾರ ವ್ಯಾಪಾರ ಹೆಚ್ಚಾಗಿರುತ್ತದೆ. ಈ ಎರಡು ದಿನಗಳ ವ್ಯಾಪಾರ ಒಂದೇ, ವಾರದ ಉಳಿದ ಐದು ದಿನಗಳ ವ್ಯಾಪಾರವೂ ಒಂದೇ.
ಮದುವೆ ಸಮಾರಂಭ ನಡೆಸುವ ಹಾಲ್ ಗಳಿಗೂ ತೊಂದರೆಯಾಗಿದೆ. ಹೀಗಾಗಿ ಸರ್ಕಾರ ಈ ಕೂಡಲೇ ವೀಕೆಂಡ್ ಕರ್ಫ್ಯೂವನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.









