ಕೊರೊನಾ ರಿಪೋರ್ಟ್ | 24 ಗಂಟೇಲಿ 30,948 ಕೇಸ್ ಪತ್ತೆ Corona Report saaksha tv
ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಏರಿಳಿತ ಮುಂದುವರೆದಿದ್ದು, ಕಳೆದ 24 ತಾಸುಗಳ ಅವಧಿಯಲ್ಲಿ 30,948 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 403 ಮಂದಿ ಹೆಮ್ಮಾರಿ ಸೋಂಕಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 3,24,24,234ಕ್ಕೆ ತಲುಪಿದೆ. ಸಾವಿನ ಸಂಖ್ಯೆ 4,34,367ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ 38,487 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,16,36,469ಕ್ಕೆ ತಲುಪಿದೆ.
ದೇಶದಲ್ಲಿನ್ನೂ 3,53,398 ಕೊರೊನಾ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.









